ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಕೊರೊನಾ ಲಸಿಕೆ ಮೊದಲ ಡೋಸ್ ಪಡೆದುಕೊಂಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ನವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬೆಂಗಳೂರು ಮೆಡಿಕಲ್ ಕಾಲೇಜ್-ಪಿಎಂಎಸ್ಎಸ್ವೈ ನಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಮೊದಲನೇ ಡೋಸ್ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಉಪಸ್ಥಿತರಿದ್ದರು.
ಇಂದು ಸಂಜೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಸಿಕೆ ಪಡೆದುಕೊಂಡಿದ್ದಾರೆ. ಟ್ವೀಟ್ ಮಾಡಿರುವ ಅವರು, ನಾನು ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ‘ಮೇಡ್ ಇನ್ ಇಂಡಿಯಾ’ ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದೇನೆ. ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿ ಆದಷ್ಟು ಬೇಗನೇ ಕೋವಿಡ್ ಲಸಿಕೆ ಪಡೆಯುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಅದೇ ರೀತಿಯಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಲಸಿಕೆಯ ಮೊದಲನೇ ಡೋಸ್ ಪಡೆದುಕೊಂಡರು.
ಜನಶಕ್ತಿ ಮೀಡಿಯಾ ವಾಟ್ಸಪ್ ಸೇರಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ