ಬೆಂಗಳೂರು: ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿಡಿ ಪ್ರಕರಣವನ್ನು ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ಆಗಲಿ ಎಂದು ಇಂದು ಕಾಂಗ್ರೆಸ್ ಸದಸ್ಯರು ಅಧಿವೇಶನದಲ್ಲಿ ಸದನದ ಬಾವಿಗಿಳಿದು ಪ್ರತಿಭಟಿಸಿದರು.
ಸದನದಲ್ಲಿ ಗದ್ದಲ ಜೋರಾಗುತ್ತಿದ್ದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶಿಸಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸರಕಾರವು ಎಸ್ಐಟಿ ತನಿಖೆಗೆ ವಹಿಸಿದೆ. ಅದನ್ನು ಮುಂದುವರೆಸಲಾಗುವುದು ಎಂದು ಹೇಳಿದರು.
ಅದಕ್ಕೆ ತೃಪ್ತರಾಗದ ಕಾಂಗ್ರೆಸ್ ಸದಸ್ಯರು ಪ್ರತಿಭಟಿಸಿದರು. ಗದ್ದಲ ಜೋರಾದ ಪರಿಣಾಮವಾಗಿ ಸ್ಪೀಕರ್ ಸದನವನ್ನು ನಾಳೆಗೆ ಮುಂದೂಡಿದರು. ನಾಳೆಯೂ ಸಹ ಧರಣಿ ಮಾಡಲು ಕಾಂಗ್ರೆಸ್ ಸದಸ್ಯರು ನಿರ್ಧರಿಸಿದ್ದಾರೆ.
ವಿಧಾನಸಭೆಯ ಅಧಿವೇಶನದಲ್ಲಿ ನಿಯಮ 69ರ ಅಡಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಲುವಳಿ ಮಂಡಿಸಿದರು. ಇದಕ್ಕೂ ಕಾಂಗ್ರೆಸ್ ಶಾಸಕಾಂಗದ ಸಭೆ ನಡೆದು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ನಿರ್ಧಸಿದ್ದರು.