ಲಖನೌ: ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಮದ್ಯ ಮಾಫಿಯಾಗಳೊಂದಿಗೆ ಸಂಬಂಧವಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಯುಪಿಯಲ್ಲಿ ಕಳ್ಳಭಟ್ಟಿ ಸೇವನೆಯಿಂದಾಗಿ ಸುಮಾರು 400ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆಂದು ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಆರೋಪಿಸಿದೆ.
‘ಕಳೆದ ನಾಲ್ಕು ವರ್ಷಗಳಲ್ಲಿ ಕಳ್ಳಭಟ್ಟಿ ಸೇವನೆಯಿಂದಾಗಿ 400 ಜನರ ಬಲಿಯಾಗಿದೆ. ಅಕ್ರಮ ಮತ್ತು ನಕಲಿ ಮದ್ಯ ತಯಾರಿಯು ಉತ್ತರ ಪ್ರದೇಶದಲ್ಲಿ ವ್ಯಾಪಾಕವಾಗಿ ನಡೆಯುತ್ತಿದ್ದು ಇದು ಆತಂಕ ಹುಟ್ಟಿಸುತ್ತಿದೆ. ರಾಜ್ಯ ಸರ್ಕಾರ ಮತ್ತು ಮದ್ಯ ಮಾಫಿಯಾ ನಡುವಿನ ಒಪ್ಪಂದವೇ ಇದಕ್ಕೆ ಕಾರಣವಾಗಿದೆʼ ಎಂದು ಅಜಯ್ ಕುಮಾರ್ ಲಲ್ಲು ಹೇಳಿದ್ದಾರೆ.
ಮದ್ಯ ಮಾಫಿಯಾದಲ್ಲಿ ತೊಡಗಿರುವವರನ್ನು ರಾಜ್ಯದ ಬಿಜೆಪಿ ಸರ್ಕಾರವು ರಕ್ಷಿಸುತ್ತಿದೆ. ನೂರಾರು ಸಾವುಗಳು ನಡೆದರೂ ಸಹ ಜವಾಬ್ದಾರಿಯುತ ಹುದ್ದೆಗಳಲ್ಲಿರುವ ಅಧಿಕಾರಿಗಳ ವಿರುದ್ಧ ಸರಕಾರವು ಏಕೆ ಕ್ರಮಕೈಗೊಳ್ಳಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.