ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಇಲ್ಲ, ಮಾಜಿ ಸಚಿವ ಬಾಬಾಗೌಡ ಪಾಟೀಲ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ನಮ್ಮ ಮತ ಇಲ್ಲ ಎಂದು ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಹೇಳಿದರು.

ಬೆಳಗಾವಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನದಾತರ ಆಂದೋಲನದ ಬೆಂಬಲದ ಒಂದು ಭಾಗವಾಗಿದ್ದು, ಈ ಮೂಲಕ ಪ್ರಧಾನಿ ಮೋದಿಯವರಿಗೆ ಸಂದೇಶ ಕಳುಹಿಸುತ್ತೇವೆ ಎಂದಿದ್ದಾರೆ.

ಮುಂದುವರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಮ್ಮ ಮನೆಗೆ ಬಂದು, ಉಪಚುನಾವಣೆಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರೈತರ ಪರ ಅನೇಕ ವಿಷಯ ಸೇರಿಸಬೇಕು ಅದನ್ನು ರೈತರನ್ನು ಕೇಳಿ ಹೇಳುತ್ತೇನೆ ಎಂದಾಗ ಡಿ ಕೆ ಶಿವಕುಮಾರ್ ಅವರು ಈ ಕುರಿತು ಹೈಕಮಾಂಡ್ ಜೊತೆಗೆ ಮಾತನಾಡುವ ಭರವಸೆ ‌ಕೊಟ್ಟಿದ್ದಾರೆ.

ಈಗಾಗಲೇ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವ ತಿರ್ಮಾನ ಮಾಡಿದ್ದೇವೆ ಎಂದಿದ್ದಾರೆ. ಇದು ಸಹಜವಾಗಿಯೇ ಕಾಂಗ್ರೆಸ್ ಬೆಂಬಲಿಸುವಂತೆ ಅರ್ಥವಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

Donate Janashakthi Media

Leave a Reply

Your email address will not be published. Required fields are marked *