ರೆಮ್ಡೆಸಿವಿರ್ ಔಷಧ ದುರ್ಬಳಕೆ, ಕೃತಕ ಅಭಾವ ಸೃಷ್ಟಿ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ

ಹುಮ್ನಾಬಾದ್: ಕೋವಿಡ್ ವೈರಾಣು ತಡಗಟ್ಟಲು ಪ್ರಾಥಮಿಕವಾಗಿ ನೀಡಲಾಗುವ ರೆಮ್ಡೆಸಿವಿರ್ (Remdesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆಯಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ: ಕೊರೊನಾ ಎರಡನೆ ಅಲೆ: ಸೋಂಕಿನ ಪ್ರಮಾಣ ಹೆಚ್ಚಳ, ಒಂದೇ ದಿನದಲ್ಲಿ 2 ಲಕ್ಷ ಪ್ರಕರಣಗಳು

ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೆಮ್ಡೆಸಿವಿರ್ ಔಷಧ ಕೊರತೆ ಇಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದರೆ ಈ ಔಷಧಿಯ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತಿದೆ. ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇಂಥ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು‌.

ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಸರಕಾರ ಬಹಳಷ್ಟು ಸಮಸ್ಯೆಗಳನ್ನು ಎದುರಿಸಿತ್ತು. ಆದರೆ ಈಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಸ್ಪತ್ರೆಗಳಲ್ಲಿ ಕೊವಿಡ್‌ಗೆ ಸಂಬಂಧಿಸಿದ ಮೂಲಸೌಕರ್ಯಗಳನ್ನು ಅಳವಡಿಸಲಾಗಿದೆ. ಲಸಿಕೆ ಕೊರತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿ: ಎರಡನೇ ಕೋವಿಡ್ ಅಲೆ: ಜನಗಳ ಆರೋಗ್ಯ ಮತ್ತು ಜೀವನೋಪಾಯ ರಕ್ಷಿಸಬೇಕು

ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ: ಕೋವಿಡ್ ನಿಂದ ಗೃಹ ಇಲಾಖೆಯ ಸಿಬ್ಬಂದಿಗಳ ಸುರಕ್ಷತೆ ಮತ್ತು ಇಲಾಖೆಯಿಂದ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳುವ ತುರ್ತು ಸೇವೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಶುಕ್ರವಾರ ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *