ಬೆಂಗಳೂರು: ರಾಜ್ಯದಲ್ಲಿ ಲಸಿಕೆ ಕೊರತೆ ನೀಗಿಸುವ ಬದಲು “ಟೀಕಾ ಉತ್ಸವ” ಎನ್ನುವ ಬೂಟಾಟಿಕೆ ಆಡುತ್ತಿದ್ದಾರೆ! ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ವಾಸ್ತವದಲ್ಲಿ ರಾಜ್ಯದಲ್ಲಿ ಲಸಿಕೆಗಳಿಗೆ ತೀವ್ರ ಕೊರತೆ ಉಂಟಾಗಿದೆ, ಆದರೆ ರಾಜ್ಯ ಸರ್ಕಾರ “ಲಸಿಕೆ ಉತ್ಸವ” ಎನ್ನುವ ಸುಳ್ಳುಗಳ ಭ್ರಮೆಯ ಉತ್ಸವ ನಡೆಸುತ್ತಿದೆ. ಜನರ ಮರಣದಲ್ಲೂ ಮಹೋತ್ಸವ ಆಚರಿಸಲು ಬಿಜೆಪಿಯಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ ಮಾತ್ರ ಸಾಧ್ಯ ಎಂದು ಕಿಡಿಕಾರಿದೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದರೂ ಸೋಂಕಿತ ಸರ್ಕಾರಕ್ಕೆ ಇನ್ನೂ ಗಾಂಭೀರ್ಯತೆ ಬಂದಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಕೋವಿಡ್ ಲಸಿಕೆಗಳ ಕೊರತೆ ಎದುರಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ವಾಸ್ತವದಲ್ಲಿ ರಾಜ್ಯದಲ್ಲಿ ಲಸಿಕೆಗಳಿಗೆ ತೀವ್ರ ಕೊರತೆ ಉಂಟಾಗಿದೆ, ಆದರೆ @BJP4Karnataka "ಲಸಿಕೆ ಉತ್ಸವ" ಎನ್ನುವ ಸುಳ್ಳುಗಳ ಭ್ರಮೆಯ ಉತ್ಸವ ನಡೆಸುತ್ತಿದೆ.
ಜನರ ಮರಣದಲ್ಲೂ ಮಹೋತ್ಸವ ಆಚರಿಸಲು ಬಿಜೆಪಿಯಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ ಮಾತ್ರ ಸಾಧ್ಯ
ಪರಿಸ್ಥಿತಿ ಬಿಗಡಾಯಿಸುತ್ತಿದ್ದರೂ #ಸೋಂಕಿತಸರ್ಕಾರ ಕ್ಕೆ ಇನ್ನೂ ಗಾಂಭೀರ್ಯತೆ ಬಂದಿಲ್ಲ
— Karnataka Congress (@INCKarnataka) April 15, 2021
ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊರತೆ ನೀಗಿಸುವ ಬದಲು “ಟೀಕಾ ಉತ್ಸವ” ಎನ್ನುವ ಬೂಟಾಟಿಕೆ ಆಡುತ್ತಿದ್ದಾರೆ. ಇಲ್ಲಿ ಬಿಜೆಪಿ ನಾಯಕರು ಲಸಿಕೆ ಕೊರತೆ ಇಲ್ಲವೆಂದು ಸುಳ್ಳು ಹೇಳುತ್ತಿದ್ದಾರೆ.ಆದರೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರೇ ಲಸಿಕೆ ಕೊರತೆ ನೀಗಿಸಲು ಯಾವ ಕ್ರಮ ಕೈಗೊಂಡಿದ್ದೀರಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ : ರೆಮ್ಡೆಸಿವಿರ್ ಔಷಧ ದುರ್ಬಳಕೆ, ಕೃತಕ ಅಭಾವ ಸೃಷ್ಟಿ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾರ್, ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೂ ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರಿಮಿಡೆಸಿವಿರ್ ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.