ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ ಶಾಂತನಗೌಡರ್ ನಿಧನ

ದೆಹಲಿ/ ಬೆಂಗಳೂರು : ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ ಶಾಂತನಗೌಡರ್ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷವಾಗಿತ್ತು.

ಕ್ಯಾನ್ಸರ್‌ ಹಾಗೂ ಶ್ವಾಸಕೋಶದ ಸೋಂಕಿನಿಂದ ಗುರಂಗಾವ್ ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದ ಜಸ್ಟೀಸ್ ಶಾಂತನಗೌಡರ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ನಿನ್ನೆಯವರೆಗೆ ಅವರ ಆರೋಗ್ಯ ಸ್ಥಿರವಾಗಿತ್ತು, ಆದರೆ ಮಧ್ಯರಾತ್ರಿ 12.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸುಪ್ರೀಂಕೋರ್ಟ್‌ನ ಸಹಾಯಕ ರಿಜಿಸ್ಟ್ರಾರ್‌ ಗಗನ್‌ ಸೋನಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಮೂಲದವರಾದ ಶಾಂತನಗೌಡರ್ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲದಿಂದ ಕಾನೂನು ಪದವಿ ಪಡೆದಿದ್ದರು. ಮೇ 5, 1958 ರಂದು ಜನಿಸಿದ ನ್ಯಾಯಮೂರ್ತಿ ಶಾಂತನಗೌಡರ್ ಸೆಪ್ಟೆಂಬರ್ 1980 ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು.

 

ತಮ್ಮ ಅಭ್ಯಾಸವನ್ನು ಬೆಂಗಳೂರಿಗೆ ವರ್ಗಾಯಿಸುವ ಮೊದಲು ಧಾರವಾಡದಲ್ಲಿ ಒಂದು ವರ್ಷ ಅಭ್ಯಾಸ ಮಾಡಿದರು. 1991 ರಿಂದ 1993 ರವರೆಗೆ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ಮ ಉಪಾಧ್ಯಕ್ಷರಾಗಿ ಮತ್ತು 1995 ಮತ್ತು 1996 ರ ಅವಧಿಯಲ್ಲಿ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 1999 ರಿಂದ 2002 ರವರೆಗೆ ಕರ್ನಾಟಕ ರಾಜ್ಯದ ರಾಜ್ಯ ಸಾರ್ವಜನಿಕ ಅಭಿಯೋಜಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರನ್ನು ಮೇ 12, 2003 ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು ಮತ್ತು ಸೆಪ್ಟೆಂಬರ್ 24, 2004 ರಂದು ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಮಾಡಲಾಯಿತು. ಆಗಸ್ಟ್ 1, 2016 ರಂದು ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. ಅವರು ಸೆಪ್ಟೆಂಬರ್ 22, 2016 ರಂದು ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರನ್ನು ಫೆಬ್ರವರಿ 17, 2017 ರಂದು ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಯಿತು.

2017ರಲ್ಲಿ ನ್ಯಾ. ಮೋಹನ್ ಎಂ ಶಾಂತನಗೌಡರ್ ಸುಪ್ರೀಂಕೋರ್ಟ್‌ಗೆ ನೇಮಕಗೊಂಡಿದ್ದು, 2023ರ ಮೇ 4ರ ವರೆಗೆ ಅವರ ಸೇವಾವಧಿ ಇತ್ತು. ಇದೀಗ ಅನಾರೋಗ್ಯದಿಂದ ಮೃತರಾಗಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *