ಕೋವಿಡ್‌: ಕೃತಕ ಅಭಾವ ಎದುರಾಗದಂತೆ ಕ್ರಮವಹಿಸಲು ಸಿಎಂ ಸೂಚನೆ

ಬೆಂಗಳೂರು: ರೆಮ್‌ಡಿಸಿವಿರ್‌ ಮತ್ತು ಆಕ್ಸಿಜನೇಟೆಡ್‌ ಬೆಡ್‌ಗಳ ವಿವೇಚನಾರಹಿತ ಬಳಕೆಯಾಗದಂತೆ ಕ್ರಮವಹಿಸಬೇಕು. ಅಗತ್ಯವಿರುವವರಿಗೆ ಮಾತ್ರ ಇಂಜೆಕ್ಷನ್‌ ಹಾಗೂ ಆಕ್ಸಿಜನೇಟೆಡ್‌ ಬೆಡ್‌ಗಳನ್ನು ಒದಗಿಸುವ ಮೂಲಕ ಕೋವಿಡ್‌ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿರ್ವಹಣೆಯಲ್ಲಿ ಕೃತಕ ಅಭಾವ ಸೃಷ್ಠಿಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನು ಓದಿ: ಲಾಕ್‌ಡೌನ್‌ : ಸರಕಾರದಿಂದ ಅಗತ್ಯ ಕ್ರಮಗಳಿಲ್ಲ, ನಾಲ್ಕು ಘಂಟೆಯಲ್ಲಿ ವ್ಯಾಪಾರ ಮಾಡೋದು ಹೇಗೆ?

ಇಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆದಿದೆ.

ಸಭೆಯಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನ ಅನುಷ್ಠಾನ, ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವಹಿಸಬೇಕು. ಸಾರ್ವಜನಿಕರು ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದುವರೆಗೂ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆದಿಲ್ಲದ ಕಡೆಗಳಲ್ಲಿ ಆದ್ಯತೆಯ ಮೇರೆಗೆ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಕೂಡಲೇ ತೆರೆಯಬೇಕು ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳು ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲು ಸೂಚಿಸಲಾಗಿದೆ. ಇದಕ್ಕಾಗಿ ವಸತಿ ಶಾಲೆಗಳು, ಹಾಸ್ಟೆಲ್‌ಗಳನ್ನು ಬಳಸಿಕೊಳ್ಳಲು ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಇದನ್ನು ಓದಿ: ಆಹಾರ ಭದ್ರತೆಯ ಮೇಲಿನ ದಾಳಿಯನ್ನು ಹಿಮ್ಮೆಟ್ಟಿಸಬೇಕು

ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದ್ದು ಮನೆಯಲ್ಲಿ ಇದ್ದು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ ರೋಗಿಗಳಿಗೆ ಮೆಡಿಕಲ್‌ ಕಿಟ್‌ಗಳನ್ನು ವಿತರಿಸಲು ಕ್ರಮವಹಿಸಬೇಕು ಹಾಗೂ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನ್ನು ರಚಿಸಬೇಕೆಂದು ಸೂಚಿಸಲಾಗಿದೆ.

 

ಜಿಲ್ಲೆಗಳಲ್ಲಿ ಆಕ್ಸಿಜನ್‌ ಕೊರತೆಯಾದರೆ ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲೆಯಿಂದ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ಹಾಗೆಯೇ ಸರಕಾರದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಇತರೆ ಸಂಪನ್ಮೂಲಗಳನ್ನು ಬಳಸಿಕೊಂಡು ಕೋವಿಡ್‌ ನಿವಾರಣೆಗಾಗಿ ಬಳಸಿಕೊಳ್ಳಬೇಕೆಂದು ತಿಳಿಸಲಾಗಿದೆ.

ಮೈಸೂರಿನಲ್ಲಿ ಆಕ್ಸಿಜನ್‌ ಉತ್ಪಾದನಾ ಪ್ಲಾಂಟ್‌ನಲ್ಲಿ ಇರುವ ಐದು ಆಕ್ಸಿಜನ್‌ ಜನರೇಟಿಂಗ್‌ ಘಟಕಗಳಲ್ಲಿ ಎರಡು ಮಾತ್ರ ಮಾತ್ರ ಕಾರ್ಯಚರಣೆಯಲ್ಲಿದೆ. ಕೂಡಲೇ ಉಳಿದ ಮೂರು ಘಟಕಗಳ ದುರಸ್ತಿಗೊಳಿಸಿ ಕಾರ್ಯಾರಂಭ ಮಾಡಲು ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನು ಓದಿ: ನಿರ್ದಯಿ………….. ನಿಷ್ಕರುಣಿ!

ಕೃಷಿ ಚಟುವಟಿಕೆ ಮತ್ತು ಸರಕಾರ ಅನುಮತಿಸಿರುವ ಕೈಗಾರಿಕೆ ಮತ್ತಿತರ ಚಟುವಟಿಕೆಗಳು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ನಡೆಯುವಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

‘ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಇದೇ ವೇಳೆ ಮುಖ್ಯಮಂತ್ರಿ ಸಲಹೆ ನೀಡಿದರು.

Donate Janashakthi Media

Leave a Reply

Your email address will not be published. Required fields are marked *