ಚಾಮರಾಜನಗರ: ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟ ವರದಿಯ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿನ ಗಂಭೀರ ಸ್ವರೂಪದ ಬಗ್ಗೆ ಖುದ್ದು ಪರಿಶೀಲಿಸಲು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಭೇಟಿ ನೀಡಿದರು.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕಾಂಗ್ರೆಸ್ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಸಾವಿಗೀಡಾಗಿರುವ ದುರಂತದ ಬಗ್ಗೆ ಜಿಲ್ಲಾಧಿಕಾರಿ ಎಂ.ಆರ್.ರವಿ. ಎಸ್‌ಪಿ ದಿವ್ಯಾ ಸಾರಾ ಥಾಮಸ್ ಸೇರಿದಂತೆ ಇತರೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನು ಓದಿ: ಆಕ್ಸಿಜನ್ ಕೊರತೆ ಚಾಮರಾಜನಗರದಲ್ಲಿ 24 ಮಂದಿ ಸಾವು
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಉಪಸ್ಥಿತರಿದ್ದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ʻʻಮೈಸೂರು ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮೈಸೂರು ಜಿಲ್ಲೆಗೆ ಆಕ್ಸಿಜನ್‌ಗಳನ್ನು ಪೂರ್ಣ ಲಭ್ಯವಾಗಬೇಕು. ಆನಂತರದಲ್ಲಿ ಬೇರೆ ಜಿಲ್ಲೆಗೆ ಕೊಡಿ ಅಂತ ಹೇಳಿದ್ರಂತೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡು ಗ್ಯಾಸ್ ಏಜೆನ್ಸಿಗಳು ಮೈಸೂರು ಸುತ್ತ ಇರುವ ಮಂಡ್ಯ, ಚಾಮರಾಜನಗರ, ಮಡಿಕೇರಿ ಎರಡು ಈ ನಾಲ್ಕು ಕಡೆ ಸಪ್ಲೈ ಮಾಡುತ್ತಿದ್ದಾರೆ. ಆದರೆ, ಅವರೊಂದಿಗೆ ಸಭೆಯಲ್ಲಿ ಮೈಸೂರ ಡಿಸಿ ಹೇಳಿದ್ದಾರಂತೆ ಮೊದಲು ಮೈಸೂರಿಗೆ ಕೊಡಿ ಎಂದು.
ಇಂದಿನ ಸುದ್ದಿಗಳಂತೆ ಮೈಸೂರು ಜಿಲ್ಲಾಧಿಕಾರಿಗಳು ನಾವು ಆಕ್ಸಿಜನ್ ಕೊಡಲು ಸಿದ್ದರಿದ್ದೇವು ಆದರೆ ಅವರೇ ತೆಗೆದುಕೊಂಡಿಲ್ಲ. ಎಂದು ಹೇಳಿದ್ದಾರೆ. ಚಾಮರಾಜನಗರ ಡಿಸಿ ಹೇಳುತ್ತಾರೆ ಅದು ಸತ್ಯಕ್ಕೆ ದೂರವಾದ ಮಾತು. ನಾವು ಪತ್ರ ಬರೆಯುತ್ತೇವೆ ಎಂದು ಹೇಳಿದ್ದಾರೆ.
ಮೈಸೂರು ಡಿಸಿ ಒಂದು ಹೇಳುತ್ತಾರೆ, ಚಾಮರಾಜನಗರ ಡಿಸಿ ಒಂದು ಹೇಳುತ್ತಾರೆ. ಆದರೆ ಸತ್ಯ ಏನೆಂದು ಜನತೆಗೆ ಗೊತ್ತಾಗಬೇಕಲ್ಲ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಇದನ್ನು ಓದಿ: ಚಾಮರಾಜನಗರ ಘಟನೆ ಹೊಣೆಹೊತ್ತು ಸಿಎಂ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ
ಇದೇ ಸಂದರ್ಭದಲ್ಲಿ ಘಟನೆಯ ಬಗ್ಗೆ ಪಕ್ಷದ ಶಾಸಕರಿಂದಲೂ ಮಾಹಿತಿ ಪಡೆದುಕೊಂಡು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು ಚರ್ಚಿಸಿರುತ್ತಾರೆ.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ, ಶಾಸಕರಾದ ಪುಟ್ಟರಂಗ ಶೆಟ್ಟಿ, ನರೇಂದ್ರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್ ಮತ್ತಿತರರೊಂದಿಗೆ ಚರ್ಚಿಸಿದರು.