ತುಮಕೂರು:ಕಳೆದ ಮೂರು-ನಾಲ್ಕು ದಿನಗಳಿಂದ ಲಸಿಕೆ ಕೊಡುವುದನ್ನು ನಿಲ್ಲಿಸಲಾಗಿದೆ.
ಕೋವಿಡ್-19 ಲಸಿಕೆಯನ್ನು ಅನೇಕ ಜಿಲ್ಲೆಯಲ್ಲಿ ಬಹುತೇಕ ಖಾಲಿಯಾಗಿದೆ. ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ಲಸಿಕೆ ಕೊಡುವುದನ್ನು ನಿಲ್ಲಿಸಲಾಗಿದೆ.
ಕೊರೊನಾ ಸೋಂಕು ಬರದಂತೆ ತಡೆಗಟ್ಟುವುದು, ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಲುವಾಗಿ ಮುಂಜಾಗ್ರತೆಯಾಗಿ ಕೋವ್ಯಾಕ್ಸಿನ್, ಕೋವಿಸೀಲ್ಡ್ ಲಸಿಕೆ ನೀಡಲಾಗುತ್ತಿದೆ. ಕೋವಿಡ್ ಎರಡನೇ ಅಲೆ ಜೋರಾಗಿದ್ದು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಪ್ರತಿ ದಿನವೂ ಸರಾಸರಿ 2 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಸಾವಿನ ಪ್ರಮಾಣವೂ ಏರಿಕೆಯತ್ತಲೇ ಸಾಗಿದೆ.
ಸೋಂಕು ಹಾಗೂ ಸಾವಿನ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿದ ಜನರಿಗೆ ಆತಂಕ ಎದುರಾಗಿದೆ. ಆರಂಭದಲ್ಲಿ ಲಸಿಕೆ ಪಡೆಯಲು ಜನರು ಹಿಂಜರಿದಿದ್ದರು.