ನವದೆಹಲಿ: ದೇಶದಾದ್ಯಂತ ಕೋವಿಡ್ ಬಾಧೆಯಿಂದಾಗಿ ವಿಷಮ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಮ್ಮ ಜವಾಬ್ದಾರಿ ನಿರ್ವಹಿಸದೆ ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ದಾಳಿ ಮಾಡುತ್ತಿದ್ದಾರೆʼ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಆರೋಪಿಸಿದರು.
Nobody between 18 and 44 is getting the vaccine.
The situation in other states is not very different.
The PM and the Health Minister refuse to own responsibility and are making a mockery of democratic principles.
— P. Chidambaram (@PChidambaram_IN) May 7, 2021
ತಮಿಳುನಾಡಿನಲ್ಲಿ 45 ವರ್ಷ ಮೇಲ್ಪಟ್ಟವರು ಈಗಾಗಲೇ ಮೊದಲ ಡೋಸ್ ಪಡೆದುಕೊಂಡಿದ್ದು ಅವರಲ್ಲಿ ಬಹುತೇಕರಿಗೆ ಎರಡನೇ ಡೋಸ್ ತೆಗೆದುಕೊಳ್ಳಲು ಸಾಧ್ಯವಾಗದೆ ಅತ್ಯಂತ ಗಂಭೀರ ಪರಿಸ್ಥಿತಿ ನಾಡಿನ ಜನತೆ ಎದುರಾಗಿದೆ. ಅದರೊಂದಿಗೆ 18 ರಿಂದ 44 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಲಭ್ಯವಾಗುತ್ತಿಲ್ಲ ಎಂದು ವಿವರಿಸಿದರು.
ಇದನ್ನು ಓದಿ: ಕೇಂದ್ರ ಸರಕಾರಕ್ಕೆ ಮುಖಭಂಗ: ರಾಜ್ಯ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ಶುಕ್ರವಾರ ಒಂದೇ ದಿನದಲ್ಲಿ 4.14 ಲಕ್ಷ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಗಳು 36 ಲಕ್ಷ ದಾಟಿವೆ. ಬೇರೆ ರಾಜ್ಯಗಳಲ್ಲಿಯೂ ಕೋವಿಡ್ ಪರಿಸ್ಥಿತಿ ಆತಂಕವನ್ನು ಸೃಷ್ಠಿ ಮಾಡಿದೆ. ದೇಶವನ್ನು ಆಳುವ ಪ್ರಧಾನಿ ಮತ್ತು ಆರೋಗ್ಯ ಸಚಿವರುಗಳು ತಮ್ಮ ಸ್ಥಾನಮಾನ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸದೇ ಇದ್ದಾರೆ. ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ತೀವ್ರವಾಗಿ ಕೆಟ್ಟದಾಗಿ ಪರಿಣಾಮ ಬೀರುತ್ತಿವೆ. ಸಾಕಷ್ಟು ಲಸಿಕೆಗಳನ್ನು ಪೂರೈಕೆಯಾಗದೆ ಕಠಿಣ ಪರಿಸ್ಥಿತಿಯಾಗಿದ್ದರೂ ಸಹ ಸರ್ಕಾರ ಅದನ್ನು ನಿರಾಕರಿಸುತ್ತಿದೆʼ ಎಂದು ಪಿ ಚಿದಂಬರಂ ಟ್ವೀಟ್ ಮಾಡಿದ್ದಾರೆ.