ಬೆಂಗಳೂರು : ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ರಾಜ್ಯವನ್ನು ಸಂಪೂರ್ಣ ಲಾಕ್‌ಡೌನ್ ಮಾಡುವ ಕಠಿಣ ನಿರ್ಧಾರ ತೆಗೆದುಕೊಂಡಿದೆ.
ಮೇ 10 ರ ಬೆಳಗ್ಗೆ 6ಗಂಟೆಯಿಂದ 24 ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಏನಿರುತ್ತೆ? ಏನಿರಲಲ್ಲ ಎಂಬ ಮಾಹಿತಿ ಈ ಕೆಳಗಿನಂತಿದೆ.
ಏನಿರುತ್ತೆ?
- ಅಗತ್ಯ ವಸ್ತುಗಳನ್ನು ಖರೀದಿಸಲು ವಾಹನದಲ್ಲಿ ಹೋಗುವ ಹಾಗಿಲ್ಲ, ನಡೆದುಕೊಂಡೆ ಅಂಗಡಿಗಳಿಗೆ ಹೋಗಬೇಕು
- ಆಹಾರ, ಹಾಲು, ಹಣ್ಣು ಮಾಂಸದ ಅಂಗಡಿ ಮಾರಾಟಕ್ಕೆ ಅವಕಾಶ(ಬೆಳಗ್ಗೆ 6 ರಿಂದ 10 ಗಂಟೆ)
- ತಳ್ಳುಗಾಡಿಯಲ್ಲಿ ತರಕಾರಿ ಮಾರಾಟ ಮಾಡಲು ಅವಕಾಶ. (ಬೆಳಗ್ಗೆ 6 ರಿಂದ ಸಂಜೆ 6 ಅವಕಾಶ).
- ಎಲ್ಲಾ ಬಗ್ಗೆ ವೈದ್ಯಕೀಯ ಸೇವೆ, ತುರ್ತು ಚಿಕಿತ್ಸೆಗೆ ತೆರಳಲು ಅವಕಾಶ.
- ಕೋವಿಡ್ ನಿಯಮಾವಳಿಯಂತೆ ಶೇ 50ರಷ್ಟು ಹಾಜರಾತಿಯೊಂದಿಗೆ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಲಿವೆ. ರಸ್ತೆ ಕಾಮಗಾರಿ, ಕಟ್ಟಡ ಕಾಮಗಾರಿ ಯಾವುದೇ ರೀತಿಯ ಅಡ್ಡಿಯಿಲ್ಲ.
- ವಿವಾಹ/ಶುಭ ಕಾರ್ಯಕ್ರಮದಲ್ಲಿ 50 ಜನ ಮಾತ್ರ ಭಾಗವಹಿಸಲು ಅವಕಾಶ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಏನಿರಲ್ಲ?
- ಅಂಗಡಿ ಮುಂಗ್ಗಟ್ಟು, ಮಾರುಕಟ್ಟೆ, ಶಾಪಿಂಗ್ ಮಾಲ್, ಸಿನಿಮಾ ಮಂದಿರ, ಹೊಟೆಲ್, ರೆಸಾರ್ಟ್, ಕೈಗಾರಿಕಾ ಚಟುವಟಿಕೆ ನಿಬಂಧಿಸಲಾಗಿದೆ.
- ಕೆಎಸ್ಸಾರ್ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ ಸೇರಿದಂತೆ ಸಾರಿಗೆ ಸಂಚಾರ 14 ದಿನಗಳ ಕಾಲ ಬಂದ್ ಆಗಲಿದೆ. ಅಂತಾರಾಜ್ಯ ಬಸ್ ಸಂಚಾರವೂ ಸ್ಥಗಿತ. ಖಾಸಗಿ ವಾಹನಗಳಲ್ಲಿ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.
- ಸಿನಿಮಾ ಹಾಲ್, ಗ್ರಂಥಾಲಯ, ರಂಗಮಂದಿರ, ಜಿಮ್, ಕ್ರೀಡಾಂಗಣ, ಆಡಿಟೋರಿಯಂ, ಈಜುಕೊಳ ಎಲ್ಲವೂ ಬಂದ್.
- ಹೋಟೆಲ್, ರೆಸ್ಟೋರೆಂಟ್ ಬಂದ್ ಆಗಿರಲಿದ್ದು, ಪಾರ್ಸೆಲ್ ವ್ಯವಸ್ಥೆಗೆ ಅನುಮತಿ ಇರಲಿದೆ.
- ಮದ್ಯ ಮಳಿಗೆಯಲ್ಲಿ ಪಾರ್ಸೆಲ್ ವ್ಯವಸ್ಥೆಗೆ ಮಾತ್ರ ಅನುಮತಿ (ನಿರ್ಬಂಧಿತ ಅವಧಿ ಬೆಳಗ್ಗೆ 6 ರಿಂದ 10)