ಅಗತ್ಯ ಇರುವವರಿಗೆ ಪ್ರಾಣವಾಯು ನೀಡಲು ಸಿದ್ಧವಾದ ಬಿಎಂಟಿಸಿ ಬಸ್

ಆಸ್ಪತ್ರೆ ಹೊರಗೆ, ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ‌ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಸಾಕಷ್ಟು‌ ಮಂದಿಗೆ ಉಸಿರಾಟದ ಸಮಸ್ಯೆ ಉಲ್ಬಣಿಸುತ್ತಿದೆ. ಎಷ್ಟೋ ಜನ ಆಕ್ಸಿಜನ್ ಇಲ್ಲದೆ ಸಾವನ್ನಪ್ಪುತ್ತಿದ್ದಾರೆ. ಜೊತೆಗೆ ಆಕ್ಸಿಜನ್ ಸಮಸ್ಯೆ ಕೂಡ ಹೆಚ್ಚಾಗಿದೆ. ಹೀಗಾಗಿ ಬಿಎಂಟಿಸಿ ಹೊಸ ಫ್ಲ್ಯಾನ್ ಮಾಡಿದೆ.

ನಿತ್ಯ ಸಾವಿರಾರು ಸಾರ್ವಜನಿಕರನ್ನು ಹೊತ್ತೊಯ್ಯುತ್ತಿದ್ದ ಬಿಎಂಟಿಸಿ ಈಗ ಆಕ್ಸಿಜನ್‌ ವ್ಯವಸ್ಥೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ ಆಕ್ಸಿಜನ್ ಸಮಸ್ಯೆ ಇರುವ ಕಾರಣ ಬಸ್ ನಲ್ಲೇ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. ಬಿಎಂಟಿಸಿಯ ಕೆಲವೊಂದು ಬಸ್ ಗಳಲ್ಲಿ ಆಕ್ಸಿಜನ್ ಸಿಲಿಂಡರ್ ಇಡಲಾಗಿದೆ. ಬಿಎಂಟಿಸಿ ಬಸ್ ನಲ್ಲೇ ಎಮರ್ಜೆನ್ಸಿ ಇರೋರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ.

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಕಾದು ಕಾದು ಆಕ್ಸಿಜನ್ ಸಮಸ್ಯೆಯಾಗ, ಆಕ್ಸಿಜನ್ ಕೊಡೋಕು ಜಾಗ ಸಿಗದೆ ಸಾವನ್ನಪ್ಪಿರುವ ಅದೆಷ್ಟೋ ಘಟನೆಗಳಿವೆ. ಹೀಗಾಗಿ ಬೆಡ್ ಸಿಗದೆ ಇರುವವರು ಬಿಎಂಟಿಸಿ ಬಸ್ ನಲ್ಲೇ ಕುಳಿತು ಬೆಡ್ ಸಿಗುವವರೆಗೂ ಆಕ್ಸಿಜನ್ ತೆಗೆದುಕೊಳ್ಳಬಹುದಾಗಿದೆ.

ಇದನ್ನು ಓದಿ: ಬೇಡಿಕೆ ಇಟ್ಟಿದ್ದು 3 ಕೋಟಿ ಲಸಿಕೆ-ಬಂದದ್ದು 8 ಲಕ್ಷ ಮಾತ್ರ: ಪಿ ರವಿಕುಮಾರ್‌

”ಸೋಂಕಿತರಿಗೆ ಆಕ್ಸಿಜನ್‌ ಪೂರೈಸುವ ಈ ವಿಶೇಷ ಬಸ್‌ ಅನ್ನು ಕೆ.ಸಿ.ಜನರಲ್‌ ಆಸ್ಪತ್ರೆ ಅಥವಾ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ನಿಲುಗಡೆ ಮಾಡಲಾಗುವುದು. ಕೋವಿಡ್‌ ಸೋಂಕಿತರು ಚಿಕಿತ್ಸೆಗೆ ಬಂದಾಗ ತಕ್ಷಣಕ್ಕೆ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಸಿಗದಿದ್ದಾಗ, ಮೊಬೈಲ್‌ ಬಸ್ಸಿನಲ್ಲಿಯೇ ಆಮ್ಲಜನಕ ಪಡೆಯಬಹುದಾಗಿದೆ. ರೋಗಿಗಳಿಗೆ ಆಕ್ಸಿಜನ್‌ ಒದಗಿಸಲು ಅಗತ್ಯವಿರುವ ಎಲ್ಲ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ” ಸದ್ಯಕ್ಕೆ ಪ್ರಾಯೋಗಿಕವಾಗಿ ಒಂದು ಬಿ.ಎಂ.ಟಿ.ಸಿ. ಬಸ್ ಅನ್ನು ಇದಕ್ಕಾಗಿ ಬಳಸಲಾಗುತ್ತಿದೆ.

ಫೌಂಡೇಶನ್ ಇಂಡಿಯಾ ಎಂಬ ಸ್ವಯಂಸೇವಾ ಸಂಸ್ಥೆಯವರು ಈ ಬಸ್ಸಿನಲ್ಲಿ ಆಮ್ಲಜನಕ ಸರಬರಾಜು ಮಾಡಿ ಸೇವೆ ನೀಡಲು ಎಲ್ಲಾ ಅಗತ್ಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ಏಕಕಾಲಕ್ಕೆ ಒಟ್ಟು ಎಂಟು ಮಂದಿ ರೋಗಿಗಳಿಗೆ ಈ ಬಸ್ಸಿನಲ್ಲಿ ಆಮ್ಲಜನಕ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್ ನಂತಹ ಅಪಾಯಕಾರಿ ರೋಗದಿಂದ ತತ್ತರಿಸುತ್ತಾ ಆಮ್ಲಜನಕಕ್ಕಾಗಿ ಪ್ರಯಾಸ ಪಡುವವರಿಗೆ ಇದು ಸಂಜೀವಿನಿ ಆಗಬಲ್ಲದು ಎಂದು  ಸಾರಿಗೆ ಸಚಿವ ಲಕ್ಷ್ಮಣ ಸವದಿಯವರು ಅಭಿಪ್ರಾಯವಾಗಿದೆ.

ಚಾಲಕರು ಮತ್ತು ಸಿಬ್ಬಂದಿಗಳಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ ‘ಆಕ್ಸಿಜನ್ ಆನ್ ವ್ಹೀಲ್ಸ್’ ಬಸ್ಸನ್ನು ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್ ಗಳನ್ನು ಇದರಲ್ಲಿ ಒದಗಿಸಲಾಗುವುದು. ಪ್ರತಿ ರೋಗಿಗಳೂ ಸಾಮಾನ್ಯವಾಗಿ 2ರಿಂದ 4 ಗಂಟೆಯ ಅವಧಿಯಲ್ಲಿ ಈ ಸೌಲಭ್ಯ ದಿಂದ ತಮಗೆ ಬೇಕಾದ ಅಗತ್ಯ ಪ್ರಮಾಣದ ಆಕ್ಸಿಜನ್ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ : 10 ದಿನಕ್ಕೆ 5 ಲಕ್ಷ ರೂಪಾಯಿ ಬಿಲ್: ಕೊರೊನಾ ಸೋಂಕಿತರ ಸುಲಿಗೆ ಮಾಡುತ್ತಿರುವ ಮಂಗಳೂರು ಖಾಸಗಿ ಆಸ್ಪತ್ರೆ

ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌! : ಬೆಂಗಳೂರು ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ರೋಗಿಗಳಿಗೆ ಆಕ್ಸಿಜನ್‌ ನೀಡಲು ‘ಆಕ್ಸಿ ಬಸ್‌’ ಸಿದ್ಧವಾಗಿದೆ. ಈ ಬಸ್‌ ಆಮ್ಲಜನಕದ ಅಗತ್ಯವಿರುವ ಕೋವಿಡ್‌ ಸೋಂಕಿತರ ಮನೆ ಬಾಗಿಲಿಗೆ ತೆರಳಿ ಪ್ರಾಣವಾಯು ನೀಡಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬಿಬಿಎಂಪಿ ಸಹಯೋಗದಲ್ಲಿ ಪ್ರಾಯೋಕವಾಗಿ ಒಂದು ಆಕ್ಸಿ ಬಸ್‌ ಸೇವೆಯನ್ನು ಶುರು ಮಾಡಿದೆ. ಖಾಸಗಿ ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಶಾಲಾ ವಾಹನ ಮಾದರಿಯ ಆಕ್ಸಿ ಬಸ್‌ ಅನ್ನು ಸಿದ್ಧಪಡಿಸಿಕೊಟ್ಟಿದೆ. ಇದರಲ್ಲಿ ಚಾಲಕ ಹಾಗೂ ವೈದ್ಯಕೀಯ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಏಕಕಾಲದಲ್ಲಿ 8 ಮಂದಿ ಸೋಂಕಿತರಿಗೆ ಆಕ್ಸಿಜನ್‌ ನೀಡುವಂತಹ ವ್ಯವಸ್ಥೆ ಇದೆ. ಇದಕ್ಕಾಗಿ ಜಂಬೋ ಮತ್ತು ಸಣ್ಣ ಸಿಲಿಂಡರ್‌ಗಳು ಲಭ್ಯ ಇವೆ.

”ಈ ವಾಹನವು ನಗರದಾದ್ಯಂತ ಸಂಚರಿಸಲಿದ್ದು, ಅಗತ್ಯವಿರುವವರಿಗೆ ಆಕ್ಸಿಜನ್‌ ವ್ಯವಸ್ಥೆ ಮಾಡಲಾಗುತ್ತದೆ. ಇದರ ಯಶಸ್ಸು ಆಧರಿಸಿ ಆಕ್ಸಿ ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡಲು ಚಿಂತಿಸಲಾಗಿದೆ,” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ. ತ್ರಿಲೋಕಚಂದ್ರ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *