ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು:  ಅಪೌಷ್ಟಿಕತೆ ಹಾಗೂ ಅನಾರೋಗ್ಯ ಪೀಡಿತ ಮಕ್ಕಳನ್ನು ಗುರುತಿಸಿ. ಅವರ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಮತ್ತು ಕೋವಿಡ್​ 3ನೇ ಅಲೆ ಎದುರಿಸಲು ಎಲ್ಲಾರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ವಿಡಿಯೋ ಸಂವಾದ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲಹೆ ನೀಡಿದರು.

ಅಂಗನವಾಡಿ ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಅಲ್ಲದೆ, ಆರೋಗ್ಯ ಇಲಾಖೆ ಜೊತೆ ನಿರಂತರವಾಗಿ ಸಂಪರ್ಕದಲ್ಲಿರಬೇಕೆಂದು ಅಂಗನವಾಡಿ ಕಾರ್ಯಕರ್ತರಿಗೆ ಅವರು ಸಲಹೆ ನೀಡಿದರು.

ಇದನ್ನು ಓದಿ: ಖಾಸಗಿ ವೈದ್ಯಕೀಯ ಲಾಬಿ ಹಾಗೂ ತನಿಖಾ ಸಮಿತಿಗಳು

ನೆನ್ನೆ ಆಶಾ ಕಾರ್ಯಕರ್ತರೊಂದಿಗೆ ಹಾಗೂ ಇಂದು ಅಂಗನವಾಡಿ ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ವಿಡಿಯೋ ಸಂವಾದವನ್ನು ನಡೆಸಿದ್ದರು. ಕೊರೊನಾ 3ನೇ ಅಲೆಯನ್ನು ಅಪ್ಪಳಿಸದಂತೆ ಶ್ರಮವಹಿಸಬೇಕಾಗಿದೆ, ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿರುವ ಬಗ್ಗೆ ಮುಂಜಾಗ್ರತವಾಗಿ ಸಭೆಗಳನ್ನು ಏರ್ಪಿಸಿದ್ದರು.

ಕೊರೊನಾ 3ನೇ ಅಲೆಯನ್ನು ಅಪ್ಪಳಿಸದಂತೆ ಶ್ರಮವಹಿಸಬೇಕಾಗಿದೆ ಎಂದರು. ಸೋಂಕಿನಿಂದ ಪತಿಯನ್ನು ಕಳೆದುಕೊಂಡಿರುವ ಅಂಗನವಾಡಿ ಕಾರ್ಯಕರ್ತೆ ಗಿರಿಜಾಗೆ ಮುಖ್ಯಮಂತ್ರಿ ಸಾಂತ್ವನ ಹೇಳಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಗಿರಿಜಾ ಅವರಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಶೇಕಡಾ 85.91ರಷ್ಟು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರು ಲಸಿಕೆ ಪಡೆದಿರುವ ಕುರಿಸು ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಅಂಗನವಾಡಿ ಕಾರ್ಯಕರ್ತರನ್ನು ಸಹ ಕೊರೊನಾ ವಾರಿಯರ್ಸ್‌ ಎಂದು ಘೋಷಣೆ ಮಾಡಿದ್ದಾರೆ.

ಕೋವಿಡ್‌ ನಿರ್ವಹಣೆಯಲ್ಲಿ ಮೃತಪಟ್ಟರೆ ಅಂತಹವರಿಗೆ ರೂ. 30 ಲಕ್ಷ ಪರಿಹಾರ ಘೋಷಿಸಿದರು. ಮೊದಲನೇ ಅಲೆ ಸಂದರ್ಭದಲ್ಲಿ ಒಟ್ಟು 20 ಮಂದಿ ಅಂಗನವಾಡಿ/ ಸಹಾಯಕಿಯರು ಮೃತಪಟ್ಟಿದ್ದು, ಅವರಿಗೆ ತಲಾ ರೂ. 30 ಪರಿಹಾರ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಕಛೇರಿಗಳ ಮುಂದೆ ಪ್ರತಿಭಟನೆ: ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳ ಕರೆ

ಮಾತೃ ಇಲಾಖೆ ಕರ್ತವ್ಯದ ಜೊತೆ ಇತರೆ ಇಲಾಖೆಗಳ ಕೆಲಸ. ಮತ್ತಿತರೆ ಕೆಲಸಗಳಿಂದ ನಮ್ಮ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳಿದ್ದು, ತಮ್ಮ ಮೇಲಿನ ಒತ್ತಡ ನಿವಾರಿಸುವಂತೆ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿಕೊಂಡರು.

ಕಾರ್ಯಕರ್ತೆಯರ ಮನವಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ದನಿಗೂಡಿಸಿದ್ದಾರೆ. ಅದಕ್ಕೆ ಪ್ರತಿಯಾಗಿ, ಆ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *