ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರಕ್ಕೆ ರಾಜ್ಯತ್ವ ಸ್ಥಾನಮಾನ ನೀಡುವ ಸಂಬಂಧ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಮತ್ತಿತರೆ ಪ್ರಮುಖ ವಿಚಾರಗಳನ್ನು ಚರ್ಚಿಸುವ ಬಗ್ಗೆ ಜೂನ್ 24ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.
370ನೇ ವಿಧಿ ರದ್ದುಗೊಳಿಸಿದ ನಂತರ ಒಂದೂವರೆ ವರ್ಷದ ನಂತರ ಇದೇ ಮೊದಲ ಬಾರಿಗೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ ಮೆಹಬೂಬಾ ಮುಫ್ತಿ, ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರುಕ್ ಅಬ್ದುಲ್ಲಾ, ಸಿಪಿಐ(ಎಂ) ಹಿರಿಯ ನಾಯಕ ಮೊಹಮ್ಮದ್ ಯೂಸುಫ್ ತರಿಗಾಮಿ ಅವರು ಈ ಸಭೆಯಲ್ಲಿ ಪಾಲ್ಗೊಳ್ಳುಲಿದ್ದಾರೆ. .
ಇದನ್ನು ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸವಾಲುಗಳನ್ನು ಎದುರಿಸಲು ಜನತಾ ಮೈತ್ರಿಕೂಟದ ಉದಯ
ಇಂದು ಜಮ್ಮು–ಕಾಶ್ಮೀರದ ‘ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್ (ಪಿಎಜಿಡಿ)’ ಮೈತ್ರಿಕೂಟ ಸದಸ್ಯರ ಸಭೆಯನ್ನು ಸೇರಿದ್ದರು.
ಪಿಎಜಿಡಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ‘ನಮ್ಮ ನಿಲುವು ಸ್ಪಷ್ಟವಾಗಿದೆ. ಅದೇನೆಂಬುದು ನಿಮಗೆಲ್ಲ ತಿಳಿದಿದೆ. ನಾಯಕರನ್ನು ಕೇಂದ್ರ ಸರ್ಕಾರವು ವೈಯಕ್ತಿಕವಾಗಿ ಆಹ್ವಾನಿಸಿರುವುದರಿಂದ, ಯಾರಿಗೆಲ್ಲ ಆಹ್ವಾನ ದೊರೆತಿದೆಯೋ ಅವರೆಲ್ಲ ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯವನ್ನು ಮಂಡಿಸಲಿದ್ದೇವೆ’ ಎಂದರು.
‘ನಾವು ಮಾತುಕತೆಯ ವಿರುದ್ಧವಿಲ್ಲ. ಮಾತುಕತೆಗೆ ಪೂರಕ ವಾತಾವರಣವನ್ನು ನಿರ್ಮಿಸುವುದಕ್ಕಾಗಿ ಕೇಂದ್ರವು ಜೈಲಿನಲ್ಲಿಟ್ಟಿದ್ದ ರಾಜಕಾರಣಿಗಳನ್ನು ಬಿಡುಗಡೆ ಮಾಡಬೇಕಾಗಿತ್ತು, ಎಂದು ನಾನು ಭಾವಿಸಿದ್ದೆ. ಆದರೆ ಹಾಗಾಗಿರಲಿಲ್ಲ’ ಎಂದು ತಿಳಿಸಿದರು.
ಇದನ್ನು ಓದಿ: ಜಮ್ಮು- ಕಾಶ್ಮೀರ ಡಿ.ಡಿ.ಸಿ. ಚುನಾವಣೆಗಳು ಬಿಜೆಪಿಯ ಕನಸು ಮತ್ತು ಮಿಥ್ಯೆಗಳಿಗೆ ಸೋಲು
2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಅಸಾಂವಿಧಾನಿಕವಾಗಿ ರದ್ದುಪಡಿಸಿದ ವಿಶೇಷ ಸ್ಥಾನಮಾನವನ್ನು ಮರಳಿಸಬೇಕೆಂದು ನಮ್ಮ ಮುಖ್ಯ ಬೇಡಿಕೆಯಾಗಿದೆ ಎಂದು ನಮ್ಮ ಸಭೆಯ ಪ್ರಮುಖ ಅಂಶವಾಗಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಸಿಪಿಐ(ಎಂ) ಹಿರಿಯ ನಾಯಕ ಮೊಹಮ್ಮದ್ ಯೂಸುಫ್ ತಾರಿಗಮಿ ಅವರು ʻʻಕೇಂದ್ರದ ಕಾರ್ಯಸೂಚಿಗೆ ನಾವು ಸಹಿ ಹಾಕಲಿದ್ದೇವೆ ಎಂದು ಯಾರೂ ತಪ್ಪಾಗಿ ಭಾವಿಸಬೇಕಿಲ್ಲ. ಕೇಂದ್ರ ಸರ್ಕಾರದ ತೀರ್ಮಾನ ಜಮ್ಮು–ಕಾಶ್ಮೀರದ ಹಿತಾಸಕ್ತಿಗೆ ಪೂರಕವಾಗಿದ್ದರೆ ನಾವು ಮುಂದುವರಿಯೋಣ. ಇಲ್ಲದಿದ್ದರೆ ನಾವು ಯಾವುದಕ್ಕೂ ಸಮ್ಮತಿಸುವುದಿಲ್ಲʼ ಎಂದು ತಿಳಿಸಿದರು.
ಫಾರೂಖ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆಯಾಗುವುದಕ್ಕೂ ಮುನ್ನ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದರು.
ಈ ಗುಪ್ಕಾರ್ ಮೈತ್ರಿಕೂಟಯಲ್ಲಿ ಒಟ್ಟು ಏಳು ಪ್ರಮುಖ ಪಕ್ಷಗಳಿದ್ದು, ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಪುನಃ ಸ್ಥಾಪಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತಿವೆ. ಹಾಗೇ, ಪ್ರಧಾನಿ ಮೋದಿಯವರೊಂದಿಗಿನ ಸಭೆಯಲ್ಲಿ ನಮ್ಮ ಅಭಿಪ್ರಾಯ ಹೇಳಿಕೊಳ್ಳಲು ಅವಕಾಶ ಸಿಗುತ್ತದೆ ಎಂದು ನಂಬಿದ್ದೇವೆ. 370ನೇ ವಿಧಿ ಮತ್ತು 35ಎ ವಿಚಾರದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಮೈತ್ರಿಕೂಟ ಸ್ಪಷ್ಟಪಡಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಭದ್ರತಾ ಮತ್ತು ಗುಪ್ತಚರ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಈಗಾಗಲೇ ಸಭೆಯು ನಡೆದಿತ್ತು.