ಕೋಲಾರ: ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆಗೆ ಹಾಗೂ ಡಿಜಿಟಲ್ ಅಂತರವೂ ಅಳಿಸಿಹಾಕುವ ಧ್ಯೇಯದೊಂದಿಗೆ ರಾಜ್ಯ ಸರಕಾರ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುತ್ತಾ ಇದ್ದು ಇದನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯುವಂತಾಗಬೇಕು ಎಂದು ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.
ನಗರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿಧ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಮಾತನಾಡಿದ ಅವರು ಸರಕಾರ ಕೊರೊನಾದಿಂದ ವಿಧ್ಯಾರ್ಥಿಗಳಿಗೆ ಹೆಚ್ಚಾಗಿ ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡುತ್ತಾ ಇದ್ದು ಗ್ರಾಮೀಣ ಪ್ರದೇಶದ ಹಾಗೂ ಬಡವರಿಗೆ ಮೊಬೈಲ್ ಇಲ್ಲ ಎನ್ನಬಾರದು ಎಂಬ ಉದ್ದೇಶದಿಂದ ಭವಿಷ್ಯದ ಭಾರತಕ್ಕಾಗಿ ವಿತರಿಸಲಾಗುತ್ತಾ ಇದೆ ಎಂದರು
ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಕಾಲೇಜು, 87 ಸರಕಾರಿ ಪಾಲಿಟೆಕ್ನಿಕ್ ಹಾಗೂ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 1.55 ಲಕ್ಷ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಾ ಇದೆ ನರೇಂದ್ರ ಮೋದಿ ಕನಸು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯಬೇಕು ಇಂತಹ ಸೌಲಭ್ಯಗಳನ್ನು ಬಳಸಿಕೊಂಡು ಒಳ್ಳೆಯ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಮುಂದೆ ಒಳ್ಳೆಯ ವಿಧ್ಯಾರ್ಥಿಗಳಾಗಿ ತಂದೆತಾಯಿಗೆ ಗುರುಗಳಿಗೆ ಒಳ್ಳೆಯ ಹೆಸರು ಕೀರ್ತಿ ಬರುವಂತೆ ಮಾಡಬೇಕು ಎಂದರು.
ಉನ್ನತ ಶಿಕ್ಷಣ ಪಡೆದು ಹೊರದೇಶಗಳಲ್ಲಿ ಕೆಲಸ ಮಾಡುತ್ತಿದ್ದವರು ಕೊರೊನಾದಿಂದ ಮತ್ತೆ ನಮ್ಮ ದೇಶಕ್ಕೆ ವಾಪಸ್ಸು ಆಗಿದ್ದು ಉದಾಹರಣೆಗಳು ಇದ್ದು ಎಷ್ಟೇ ಕಷ್ಟಬಂದರೂ ನಮ್ಮಲ್ಲಿ ಮಾತ್ರ ನೆಮ್ಮದಿಯಾಗಿ ಕೆಲಸ ಮಾಡಲು ಸಾಧ್ಯವಾಗಿದೆ ನಿಮ್ಮಂತ ವಿಧ್ಯಾರ್ಥಿಗಳು ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಪ್ರಶ್ನೆಸುವಂತಾಗುವ ಜೊತೆಗೆ ಕೊರೊನಾ ಹೋಗಲಾಡಿಸಲು ತರಗತಿಗಳು ಪ್ರಾರಂಭವಾಗುವ ಒಳಗೆ ಪ್ರತಿಯೊಬ್ಬರೂ ತಮ್ಮ ಕುಟುಂಬದವರೊಂದಿಗೆ ಲಸಿಕೆ ಹಾಕಿಸುವಂತೆ ಮನವರಿಕೆ ಮಾಡಬೇಕು ತಾವು ಹಾಕಿಸಿಕೊಳ್ಳುವ ಮೂಲಕ ಕೊರೊನಾ ಮುಕ್ತ ಕುಟುಂಬವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ ಹಿಂದೆ ನಾವು ಎಲ್ಲರೂ ಓದುವ ಸಂದರ್ಭದಲ್ಲಿ ಸೌಲಭ್ಯಗಳು ಮತ್ತು ಅವಕಾಶಗಳು ಇರಲಿಲ್ಲ ಇವತ್ತು ಸರಕಾರಗಳು ಯಾವುದೇ ವ್ಯಕ್ತಿ ವಿಧ್ಯಾಭ್ಯಾಸದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇಂದಿನ ಜಾಗತಿಕ ಮಟ್ಟದ ಆಧುನಿಕ ಕಲಿಕಾ ಮಟ್ಟಕ್ಕೆ ತಕ್ಕಂತೆ ಕಲಿಕೆಯನ್ನು ಆನ್ಲೈನ್ ಮೂಲಕವೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಗಂಗಾಧರ್ ರಾವ್, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪಂಡಿತ್ ಮುನಿವೆಂಕಟಪ್ಪ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಓಂಶಕ್ತಿ ಚಲಪತಿ, ಸದಸ್ಯರಾದ ಅಪ್ಪಿ ನಾರಾಯಣಸ್ವಾಮಿ, ಸಾಮಾ ಬಾಬು ಇದ್ದರು.