ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಬೆಂಕಿ: 18 ವಿದ್ಯಾರ್ಥಿಗಳು ಸಾವು

ಬೀಜಿಂಗ್: ಮಧ್ಯ ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಮುಂಜಾನೆ 3 ಗಂಟೆಗೆ  ಬೆಂಕಿ ಕಾಣಿಸಿಕೊಂಡಿದ್ದು, 18 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಹಾಗೂ 16 ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತಪಟ್ಟವರಲ್ಲಿ 7 ರಿಂದ 16 ವರ್ಷದೊಳಗಿನವರೇ ಹೆಚ್ಚಾದ ವಿದ್ಯಾರ್ಥಿಗಳಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಮಾಹಿತಿ ನೀಡಿವೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳೆಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಗ್ನಿ ಅವಗಘಕ್ಕೆ ನಿಖರವಾದ ಮಾಹಿತಿ ಇನ್ನು ತಿಳಿದುಬಂದಿಲ್ಲ ಎಂಬ ಮಾಹಿತಿ ಇದೆ. ಬೆಂಕಿ ಕಾಣಿಸಿಕೊಂಡಾಗ ಶಾಲಾ ಆವರಣದಲ್ಲಿ 34 ವಿದ್ಯಾರ್ಥಿಗಳಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದು,  ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *