ಕೋವಿಡ್‌ ನಿರ್ವಹಣೆಯ ವಿಫಲತೆಯಿಂದಲೇ ಹರ್ಷವರ್ಧನ್‌ ರಾಜೀನಾಮೆ: ಡಿ.ಕೆ.ಶಿವಕುಮಾರ್‌

ದಕ್ಷಿಣ ಕನ್ನಡ: ಕೇಂದ್ರ ಸರಕಾರವು ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲರಾಗಿರುವುದರಿಂದಾಗಿಯೇ ಆರೋಗ್ಯ ಸಚಿವ ಹರ್ಷವರ್ದನ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂದಿದೆ. ಸರಕಾರ ಸಮರ್ಪಕವಾಗಿ ಕೆಲಸ ಮಾಡದಿರುವುದೇ ಬಹು ದೊಡ್ಡ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಶಿರಸಿಯಲ್ಲಿ ಮಾತನಾಡಿದ ಅವರು, ವಿಫಲತೆಯು ಕೇವಲ ಹರ್ಷವರ್ಧನ್ ಅವರೊಬ್ಬರ ಜವಾಬ್ದಾರಿ ಅಷ್ಟೇ ಅಲ್ಲ, ಕೇಂದ್ರದ ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಸರಕಾರ ಹಾಗೂ ರಾಜ್ಯದ ಬಿ ಎಸ್‌ ಯಡಿಯೂರಪ್ಪ ಸರಕಾರ ಎರಡೂ ಜವಾಬ್ದಾರರು ಎಂದು ಟೀಕೆ ಮಾಡಿದರು.

ಇದನ್ನು ಓದಿ: ರೋಗ್ಯ ಸಚಿವರ ಬದಲಾವಣೆಯಿಂದ ಲಸಿಕೆ ಕೊರತೆ ನೀಗುವುದೇ: ರಾಹುಲ್ ಗಾಂಧಿ ಪ್ರಶ್ನೆ

ಒಂದು ಕಡೆ ರಾಜ್ಯದಲ್ಲಿ ಕೊರೊನಾದಿಂದಾಗಿ ಜನತೆ ಬಹಳಷ್ಟು ನೋವು ಅನುಭವಿಸಿದ್ದಾರೆ.  ಮತ್ತೊಂದು ಕಡೆ ರಾಜ್ಯ ಹಾಗೂ ಕೇಂದ್ರದಲ್ಲಿ ಬೆಲೆ ಏರಿಕೆಯಿಂದ ಎಲ್ಲರಿಗೂ ವಿಪರೀತ ತೊಂದರೆಯಾಗುತ್ತಿದೆ. ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 711 ಜನ ಸತ್ತಿದ್ದಾರೆ. 51,902 ಜನ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನು ಬಹಳಷ್ಟು ಮಂದಿ ಮನೆಯಲ್ಲೇ ಮೃತಪಟ್ಟಿದ್ದಾರೆ. ಹೀಗಾಗಿ ಇವರ  ಮಾಹಿತಿ ಸಂಗ್ರಹಿಸಲು, ಕೋವಿಡ್ ಸಂತ್ರಸ್ತರಿಗೆ ಸರಕಾರದಿಂದ ಪರಿಹಾರ ದೊರೆಯುವಂತೆ ಮಾಡಲು ನಮ್ಮ ಕಾರ್ಯಕರ್ತರು ಪ್ರಯತ್ನಿಸುತ್ತಾರೆ. ಈ ಮಧ್ಯೆ 3 ಲಕ್ಷಕ್ಕೂ ಹೆಚ್ಚು ಜನ  ಸತ್ತಿದ್ದು, ಸರಕಾರ ಕೇವಲ 30 ಸಾವಿರ ಎಂದು ಅಂಕಿ-ಅಂಶದಲ್ಲಿ ತೋರಿಸುತ್ತಿದೆ. ಕೋವಿಡ್ ನಿಂದ ಸತ್ತ ಎಲ್ಲರಿಗೂ ಹೈಕೋರ್ಟ್ ನಿಗದಿ ಮಾಡುವ ಪರಿಹಾರ ಸಿಗುವಂತಾಗಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಎಲ್ಲ ಅಧಿಕಾರಿಗಳು ಮನೆ, ಮನೆಗೂ ಹೋಗಬೇಕು, ಕೋವಿಡ್ ಸಂದರ್ಭದಲ್ಲಿ ರೈತರು, ಕಾರ್ಮಿಕರು, ಸಂಪ್ರಾದಾಯಿಕ ವೃತ್ತಿದಾರರಿಗೆ ಆಗಿರುವ ನಷ್ಟದ ಬಗ್ಗೆ ಮಾಹಿತಿ ಕಲೆ ಹಾಕಬೇಕು. ನಾವು ನಮ್ಮ ಕೆಲಸ ಮಾಡುತ್ತೇವೆ. ಸರ್ಕಾರ ಕೂಡ ಅಧಿಕಾರಿಗಳ ಮೂಲಕ ಈ ಬಗ್ಗೆ ಮಾಹಿತಿ ಕಲೆ ಹಾಕಬೇಕು ಎಂದು ಕರೆ ನೀಡಿದರು.

Donate Janashakthi Media

Leave a Reply

Your email address will not be published. Required fields are marked *