ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ರಾಜ್ಯದಲ್ಲಿ ಸೋಮವಾರ ಆರಂಭವಾಗಲಿದ್ದು ಪರೀಕ್ಷಾ ಕೇಂದ್ರಗಳನ್ನು, ಸಿಬ್ಬಂದಿಗಳನ್ನು ಹೆಚ್ಚಿಸಲಾ3ಗಿದ್ದು, ರಾಜ್ಯಾದ್ಯಂತ ಒಟ್ಟು 1.19 ಲಕ್ಷ ಕೊಠಡಿಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು.
- ಜುಲೈ 19 ಮತ್ತು 22ರಂದು ಎಸ್ಎಸ್ಎಲ್ಸಿ ಪರೀಕ್ಷೆ
- ಬೆಳಗ್ಗೆ30ರಿಂದ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ
- ಪರೀಕ್ಷೆಯಲ್ಲಿ8,76,581 ವಿದ್ಯಾರ್ಥಿಗಳು ಭಾಗಿ
- ಮೊದಲ ದಿನ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯ
- ಎರಡನೇ ದಿನ ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ
- ಪರೀಕ್ಷೆ ನಡೆಯುವ 200 ಮೀ. ಸುತ್ತಳತೆಯಲ್ಲಿ ಸೆಕ್ಷನ್ 144 (ನಿಷೇಧಾಜ್ಞೆ)
- ಸರಳವಾದ ಮಾದರಿಯಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ
- ಓಎಂಆರ್ ಶೀಟ್ನಲ್ಲಿ ವಿದ್ಯಾರ್ಥಿಗಳು ಉತ್ತರಗಳನ್ನು ಭರ್ತಿ ಮಾಡಬೇಕು
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ ಇರುವುದರಿಂದ ಇಂದು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ವರ್ಷ ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ. ಈ ವರ್ಷ 73 ಸಾವಿರದ 066 ಪರೀಕ್ಷಾ ಕೇಂದ್ರಗಳಿವೆ. ಎಲ್ಲಾ ಕಡೆ ನಿನ್ನೆ, ಇಂದು ಮತ್ತು ನಾಳೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಾಭ್ಯಾಸ ಮಾಡುತ್ತಿದ್ದಾರೆ ಎಂದರು.
ಇದನ್ನು ಓದಿ: ಜುಲೈ 19 ಹಾಗೂ 22ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಎಸ್ ಸುರೇಶ್ ಕುಮಾರ್
ಪ್ರತಿ ಕೊಠಡಿಯಲ್ಲಿ 12ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರಬಾರದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವಿಕೆ, ಕೊಠಡಿಯೊಳಗೆ ಸ್ವಚ್ಚತೆಯ ಬಗ್ಗೆ ಆದ್ಯತಾ ನಿಯಮವನ್ನು ತರಲಾಗಿದೆ. ಪ್ರತಿ ಹಂತಗಳಲ್ಲಿಯೂ ಕೋವಿಡ್ ನಿಯಮಗಳನ್ನು ಪಾಲಿಸಲಾಗುತ್ತಿದೆ. ಶಾಲೆಗಳು ಕೂಡ ತಮ್ಮದೇ ರೀತಿಯಲ್ಲಿ ನಿಯಮಗಳನ್ನು ಹಾಕಿಕೊಂಡಿವೆ. ಇವುಗಳು ಕೇವಲ ಪರೀಕ್ಷಾ ಕೇಂದ್ರಗಳಲ್ಲ, ಮಕ್ಕಳ ಸುರಕ್ಷಾ ಕೇಂದ್ರಗಳು ಆಗಿವೆ ಎಂದರು.
ಈ ಬಾರಿ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಈ ವರ್ಷ 1 ಲಕ್ಷದ 19 ಸಾವಿರದ 469 ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಇಲಾಖೆಯಿಂದ ಎಲ್ಲಾ ಜಿಲ್ಲೆಗಳಿಗೂ ನೋಡಲ್ ಅಧಿಕಾರಿಯನ್ನು ನೇಮಿಸಿದ್ದೇವೆ. ಅವರು ಯಾವುದೇ ರೀತಿಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲಿದ್ದರೆ ಎಂದರು.
ಪರೀಕ್ಷಾ ಕೇಂದ್ರ ಸುರಕ್ಷಾ ಕೇಂದ್ರವಾಗಿದ್ದು ಪೋಷಕರು ಭಯಭೀತರಾಗದೆ ಪರೀಕ್ಷೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸುವಂತೆ ಶಿಕ್ಷಣ ಸಚಿವರು ಮನವಿ ಮಾಡಿದ್ದಾರೆ.
ಹಿಂದಿನ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ನಡೆಸುವ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ 13.5% ಇತ್ತು. ಪ್ರಸ್ತುತ ಕೋವಿಡ್ ಪಾಸಿಟಿವಿಟಿ ದರ 1.6% ರಷ್ಟಿದೆ ಎಂದರು.
ಇದನ್ನು ಓದಿ: ಸರಕಾರದ ಆದೇಶಕ್ಕೂ ಬಗ್ಗದ ಖಾಸಗಿ ಶಾಲೆಗಳು: ಶುಲ್ಕಕ್ಕಾಗಿ ಪಟ್ಟುಹಿಡಿದಿವೆ
ವಿದ್ಯಾರ್ಥಿಗಳಿಗೆ ಬಹು ಆಯ್ಕೆ ಪ್ರಶ್ನೆಗಳೊಂದಿಗೆ ಹೊಸ ವಿಧಾನದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ರಾಜ್ಯದ 14929 ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೊಂದಾಯಿಸಿದ ವಿದ್ಯಾರ್ಥಿಗಳ ಪ್ರಮಾಣದ ಮೂಲಕ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳ ಬಗೆಗಿನ ಗೊಂದಲಗಳ ಬಗ್ಗೆ ಪರಿಹಾರ ಸೂಚಿಸಲಾಗಿದೆ. ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆದಿದ್ದಾರೆ. ಮತ್ತೇನಾದರೂ ಸಮಸ್ಯೆಗಳಾದ್ದಲ್ಲಿ ಬಿಇಓ ಗಳು ಪ್ರವೇಶ ಪತ್ರಗಳನ್ನು ನೀಡುವಂತೆ ಸೂಚಿಸಲಾಗಿದೆ. ಮಕ್ಕಳು ಪ್ರವೇಶ ಪತ್ರ ಪಡೆದು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಸೋಮವಾರ ಪರೀಕ್ಷೆಗೆ ಹಾಜರಾಗಲಿದ್ದಾರೆಂದು ಸಚಿವರು ತಿಳಿಸಿದರು.
ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದು, ತರಗತಿಗಳಲ್ಲಿ ಹೆಚ್ಚಿನ ವಿಭಾಗಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಸಚಿವರು ದಾಖಲಾತಿ ಹೆಚ್ಚುತ್ತಿರುವ ಶಾಲೆಗಳಿಗೆ ಅಗತ್ಯ ಸಿಬ್ಬಂದಿ ಹಾಗೂ ಮೂಲ ಸೌಕರ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಎಲ್ಲಾ ಶಾಸಕರು, ಸಂಘ ಸಂಸ್ಥೆಗಳು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಖಾಸಗಿ ಶಾಲೆಗಳು ಸಹಕಾರ ನೀಡುತ್ತಿರುವುದು ಶ್ಲಾಘನೀಯ. ಎಸ್.ಎಸ್.ಎಲ್.ಸಿ. ಪರೀಕ್ಷೆಯು ಸುಗಮವಾಗಿ ಹಾಗೂ ಯಶಸ್ವಿಯಾಗಿ ನಡೆಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.