ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಶಾಸಕಾಂಗ ಸಭೆಯನ್ನು ನಿಗದಿ ಮಾಡಿದ್ದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಜುಲೈ 26 ರಂದು ಸಿಎಂ ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಅಂತೆಲ್ಲಾ ಎಂದೆಲ್ಲಾ ಹೇಳಲಾಗಿತ್ತು. ಆ ಸಭೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಈಗ ವಿಭಿನ್ನ ನಿರ್ಧಾರದ ಮೂಲಕ ಯಡಿಯೂರಪ್ಪ ಆ ಎಲ್ಲಾ ವದಂತಿಗಳನ್ನು ಸುಳ್ಳಾಗಿಸಿದ್ದಾರೆ.
ಬಿಜೆಪಿ ಶಾಸಕಾಂಗ ಸಭೆಯನ್ನು ರದ್ದು ಮಾಡಲಾಗಿದ್ದು, ಬದಲಿಗೆ ಶಾಸಕರುಗಳಿಗೆ ಭೋಜನಕೂಟ ಏರ್ಪಡಿಸಲಾಗಿದೆ. ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭೋಜನಕೂಟ ಆಯೋಜಿಸಲಾಗಿದೆ.
ಪಕ್ಷದ ಎಲ್ಲಾ ಶಾಸಕರಿಗೆ, ವಿಧಾನಪರಿಷತ್ ಸದಸ್ಯರಿಗೆ ಔತಣಕೂಟ ಏರ್ಪಡಿಸಿದ್ದು ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಖುರ್ಚಿಯನ್ನು ಭದ್ರಗೊಳಿಸುವ ಯೋಜನೆ ಯನ್ನು ಸಿಎಂ ಹೊಂದಿದಂತೆ ಕಾಣುತ್ತಿದೆ. ಮುಂಬರುವ ಜಿ.ಪಂ, ತಾಪಂ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಪಕ್ಷ ಸಂಘಟನೆ ಬಲಗೊಳಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.
ಈ ಕೆಳಗಿನ ವಿಡಿಯೊ ನೋಡಲು ಲಿಂಕ್ ಕ್ಲಿಕ್ ಮಾಡಿ