ಬೇಲೂರು : ಹಾಸನ ಜಿಲ್ಲೆ ಬೇಲೂರಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವ್ಯಾಕ್ಸಿನ್ ಸಿಗದ ಕಾರಣ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ವ್ಯಾಕ್ಸಿನ್ ನೀಡದ ಸರ್ಕಾರದ ವಿರುದ್ದ ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ಕೊರತೆ ಉಂಟಾಗಿದ್ದು, ಲಸಿಕೆ ಕೊರತೆಯಿಂದ 5 ದಿನಗಳಿಂದ ಜನ ಆಸ್ಪತ್ರೆಗೆ ಅಲೆಯುತ್ತಿದ್ದಾರೆ. ಆದರೆ ದಿನ ನಿತ್ಯ ನಾಳೆ ಬನ್ನಿ, ನಾಡಿದ್ದು ಬನ್ನಿ ಎಂದು ಸಬೂಬು ಹೇಳುತ್ತಿರುವುದನ್ನು ವಿರೋಧಿಸಿ ಆಸ್ಪತ್ರೆಯ ಮುಂಭಾಗ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಶಾಸಕ ಲಿಂಗೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಮನುಷ್ಯತ್ವಕ್ಕಿಂತ ದೊಡ್ಡ ಧರ್ಮ ಯಾವುದು
ದೇಶದಲ್ಲಿ ಈಗಾಗಲೇ ಕೋವಿಡ್ ಎರಡನೇ ಅಲೆ ಸಂಪೂರ್ಣವಾಗಿ ಹೋಗಿಲ್ಲ. ಆದರೆ, ಸರ್ಕಾರ ಮಾತ್ರ ಅನ್‌ಲಾಕ್ ಆದೇಶ ಮಾಡಿದೆ. ಇದರ ನಡುವೆಯೇ ಈಗ ವ್ಯಾಕ್ಸಿನ್ ಸಿಗದೆ ಜನರು ಪರದಾಡುತ್ತಿದ್ದಾರೆ. ರಾಜ್ಯಾದ್ಯಂತ ಕೊರೊನಾ ಲಸಿಕೆಗೆ ತೊಂದರೆಯಾಗಿಲ್ಲ ಎಂದು ಸರ್ಕಾರ ಹೇಳುತ್ತಿದೆ ಆದರೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಇಲ್ಲದೆ ಪರದಾಡುತ್ತಿರುವ ಘಟನೆಗಳು ರಾಜ್ಯದಲ್ಲಿ ಮೇಲಿಂದ ಮೇಲೆ ನಡೆಯುತ್ತಿವೆ. ಇದು ಸರಕಾರದ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ. ಸರಕಾರ ಜೀವದ ಉಸಿರಾಗಿರುವ ಲಸಿಕೆಯನ್ನು ಎಲ್ಲರಿಗೂ ಸರಿಯಾದ ಸಮುಕ್ಕೆ ನೀಡಲು ಮುಂದಾಗಬೇಕಿದೆ.
ವರದಿ : ಪೃಥ್ವಿ ಹಾಸನ