ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಬಿಎಸ್‌ವೈ ಭೇಟಿ: ರೂ.5 ಲಕ್ಷ ಪರಿಹಾರ ವಿತರಣೆ

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ತಿಳಿಯುತ್ತಿದ್ದಂತೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಮನೆಗೆ ಯಡಿಯೂರಪ್ಪ ಭೇಟಿ ಅವರ ತಾಯಿಗೆ ಸಾಂತ್ವಾನ ಹೇಳಿದರು.

ಚಾಮರಾಜನಗರದ ಗುಂಡ್ಲುಪೇಟೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಅವರನ್ನು ನೊಡಲು ಅಭಿಮಾನಿಗಳ ನೂಕು ನುಗ್ಗಲೂ ಉಂಟಾಯಿತು. ಅಲ್ಲಿಂದ ತಾಲೂಕಿನ ಬೊಮ್ಮಲಾಪುರಕ್ಕೆ ತೆರಳಿ ರವಿ ಕುಟುಂಬವನ್ನು ಭೇಟಿ ಯಾದರು. ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ ರೂ. 5 ಲಕ್ಷ ನೆರವು ನೀಡಿದ ಯಡಿಯೂರಪ್ಪ ಇನ್ನೂ 5 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನು ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಯಡಿಯೂರಪ್ಪ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ʻʻನನ್ನ ರಾಜೀನಾಮೆಯಿಂದ ನೊಂದು ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಯಿಂದ ನನಗೆ ತುಂಬಾ ನೋವಾಗಿದೆʼʼ ಎಂದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಯಡಿಯೂರಪ್ಪ ಬಿಜೆಪಿ ಪಕ್ಷವನ್ನು ಬಲಪಡಿಸಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಡುತ್ತೇನೆ. ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುತ್ತೇವೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಡ್ಡಾರಿಗೆ ಇದು ನಾನು ನೀಡಿರುವ ಭರವಸೆ. ನನ್ನ ಕಣ್ಣೆದುರೇ ಯೋಗ್ಯ ವ್ಯಕ್ತಿಯನ್ನು ಬೆಳೆಸಬೇಕೆಂಬ ಉದ್ದೇಶವಿದೆ. ಬೊಮ್ಮಾಯಿರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ ಎಂದರು.

ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು ಸಂಯಮ ಕಳೆದುಕೊಂಡು ಮಾತನಾಡ್ತಿದ್ದಾರೆ. ಅವರಿಗೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ಸಂಪುಟ ರಚನೆಯಲ್ಲಿ ಬೊಮ್ಮಾಯಿಗೆ ಪೂರ್ಣ ಸ್ವಾತಂತ್ರ್ಯವಿದೆ. ಸಚಿವ ಸಂಪುಟ ರಚನೆಗೆ ನಾನು ಯಾವುದೇ ಸಲಹೆ ನೀಡಲ್ಲ ಎಂದು ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *