ಕಾಬೂಲ್: ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದು ಕಾಬೂಲ್ ವಿಮಾನ ನಿಲ್ದಾಣಕ್ಕೆ ಜನಜಂಗುಳಿ ಏರ್ಪಟ್ಟಿದೆ. ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಸುಮಾರು 4 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಅಫ್ಘಾನಿಸ್ತಾನದಲ್ಲಿ ಸದ್ಯದ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಫ್ಘನ್‌ನಿಂದ ತೆರಳಬೇಕಿದ್ದ ಎಲ್ಲ ವಾಣಿಜ್ಯ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ವಿಮಾನ ನಿಲ್ದಾಣದ ಬಳಿ ತಾಲೀಬಾನಿಗಳ ಅಟ್ಟಹಾಸ ತೀವ್ರಗೊಂಡಿದೆ. ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನಿಗಳ ಹಿಡಿತದಲ್ಲಿದೆ.
ಇದನ್ನು ಓದಿ: ಅರ್ಧ ಅಫ್ಘಾನ್ ಗೆದ್ದ ತಾಲಿಬಾನ್ ಕಾಬೂಲಿನತ್ತ
ತಾಲೀಬಾನ್ ಉಗ್ರರು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನ ಮರುಸ್ಥಾಪಿಸಲು ಮುಂದಾಗಿದ್ದಾರೆ. ಆಫ್ಘನ್‌ನಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳು ಸೇರಿದಂತೆ ಎಲ್ಲರ ಮೇಲೂ ಗುಂಡಿನ ಧಾಳಿಗೆ ಮುಂದಾಗಿದ್ದಾರೆ. ಸ್ವದೇಶೀಯರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ನೂರಾರು ಅಫ್ಘನ್ನರು ತಮ್ಮ ತಾಯ್ನಾಡನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಲು ಹರಸಾಹಸ ಪಡುತ್ತಿರುವುದು ಕಂಡು ಬಂದಿದೆ.
ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ದೇಶದಿಂದ ಪಲಾಯನ ಮಾಡಿದ ಬಳಿಕ 20 ವರ್ಷಗಳ ಯುದ್ಧದಲ್ಲಿ ತಾಲಿಬಾನ್ ವಶವಾಗಿದೆ. ಭಾನುವಾರ ರಾತ್ರಿ ತಾಲಿಬಾನ್ ಉಗ್ರರು ಅಧ್ಯಕ್ಷೀಯ ಭವನವನ್ನು ವಶಪಡಿಸಿಕೊಂಡರು. ಕಳೆದ 10 ದಿನಗಳಲ್ಲಿ ಅಫ್ಘಾನಿಸ್ತಾನದಲ್ಲಿ ಬಿಗುವಿನ ವಾತಾವರಣದಿಂದಾಗಿ ತಾಲಿಬಾನಿ ಉಗ್ರರು ವಶಕ್ಕೆ ಪಡೆದುಕೊಂಡಿದ್ದು, ಇದರಿಂದಾಗಿ ಜನರು ಹೈರಾಣಾಗಿದ್ದಾರೆ.
ಅಫ್ಘನ್ನಲ್ಲಿ ನೆಲೆಸಿದ್ದ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನ ತಮ್ಮ ಪ್ರಾಣ ರಕ್ಷಿಸಿಕೊಳ್ಳಲು ಅಕ್ಷರಶಃ ದಿಕ್ಕಾಪಾಲಾಗಿ ಓಡುತ್ತಿದ್ದಾರೆ. ರಾಜಧಾನಿ ಕಾಬೂಲ್ ತಾಲಿಬಾನ್ ವಶವಾಗಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಿಂದ ತೆರಳಲು ಬಯಸುವವರಿಗೆ ಅವಕಾಶ ಮಾಡಿಕೊಡಬೇಕು ಎಂದು ತಾಲಿಬಾನ್ ಸಂಘಟನೆಗೆ 60 ದೇಶಗಳಿಂದ ಮನವಿ ಮಾಡಿಕೊಂಡಿವೆ.
ಅಮೆರಿಕಾದ ಸೇನಾಪಡೆಯ ವಿಮಾನವು ಕಾಬೂಲ್ ವಿಮಾನ ನಿಲ್ದಾಣಕ್ಕೆ ಬಂದು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಸ್ಥಳದಲ್ಲಿ ನೆರೆದಿದ್ದ ಜನರು ಆತಂಕಕ್ಕೊಳಗಾಗಿದ್ದಾರೆ. ಅಮೆರಿಕ ಸರ್ಕಾರವು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆಯ ನಿಯೋಜನೆಯನ್ನು 6,000ಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಈ ನಡುವೆ ಅಮೆರಿಕಾದ ಅಧಿಕಾರಿಗಳು ಮಾಹಿತಿ ನೀಡಿ, ನಮ್ಮ ರಾಷ್ಟ್ರದ ಅಧಿಕಾರಿಗಳು ವಿದೇಶಿ ಸಿಬ್ಬಂದಿ ಹಾಗೂ ಸ್ಥಳೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲು ಸೇನಾ ವಿಮಾನವಗಳನ್ನು ಕಾಬುಲ್’ಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಅಮೆರಿಕದ ಶ್ವೇತ ಭವನದ ಎದುರು ಅಧ್ಯಕ್ಷ ಜೋ ಬೈಡನ್ ವಿರುದ್ಧ ಅಫ್ಗಾನಿಸ್ತಾನದ ಪ್ರಜೆಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಮೆರಿಕ ಪಡೆಗಳನ್ನು ಹಿಂದಕ್ಕೆ ಕರೆಸಿಕೊಂಡಿರುವ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ ಸರ್ಕಾರವು ಏರ್ ಇಂಡಿಯಾ ಮೂಲಕ ಭಾರತೀಯರನ್ನು ಕರೆತರಲು ಎರಡು ವಿಮಾನಗಳು ಸಿದ್ಧವಾಗಿವೆ.