ಕೊಡಗು: ಕೋವಿಡ್ ಸಾಂಕ್ರಾಮಿಕ ರೋಗ ತಡೆಲು ರಾಜ್ಯದ ಕೆಲವೆಡೆ ರಾಜ್ಯ ಸರಕಾರದ ನಿಯಮಾವಳಿಗಂತೆ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂವನ್ನು ಜಿಲ್ಲೆಯಲ್ಲಿ ರದ್ದುಗೊಳಿಸಲಾಗಿದೆ.
ಕೋವಿಡ್ ಪಾಸಿಟಿವಿಟಿ ಪ್ರಕರಣಗಳ ಸಂಖ್ಯೆ ಶೇಕಡಾ 2ಕ್ಕಿಂತ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರಾತ್ರಿ ಕರ್ಫ್ಯೂ ಜಾರಿಯೊಂದಿಗೆ ವಾರಾಂತ್ಯ ಸಂಪೂರ್ಣ ಕರ್ಫ್ಯೂವನ್ನು ಜಾರಿಯಲ್ಲಿತ್ತು. ಸದ್ಯ ಜಿಲ್ಲೆಯಲ್ಲಿ ಶೇಕಡಾ 2ರಷ್ಟು ಕಡಿಮೆ ಪ್ರಕರಣಗಳು ಕಡಿಮೆ ಇದ್ದು ಇದರ ಆಧಾರದಲ್ಲಿ ವಾರಾಂತ್ಯ ಕರ್ಫ್ಯೂವನ್ನು ತೆರವು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವಾರಾಂತ್ಯ ಕರ್ಫ್ಯೂ ರದ್ದಾಗಿದ್ದರೂ ರಾತ್ರಿ ಕರ್ಫ್ಯೂವನ್ನು ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶದಲ್ಲಿ ತಿಳಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಕೊಡಗಿನ ನಡುವೆ ಸಾರಿಗೆ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಅಲ್ಲದೆ, ಅಕ್ಟೋಬರ್ ಅಂತ್ಯದವರೆಗೂ ಕೇರಳದಿಂದ ಉಳಿಯಬೇಕು ಮತ್ತು ಜಿಲ್ಲಿರುವವರೂ ಸಹ ಕೇರಳಕ್ಕೆ ಅಕ್ಟೋಬರ್ ಅಂತ್ಯದವರೆಗೂ ತೆರಳಬಾರದೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಇದೇ ಸಂದರ್ಭದಲ್ಲಿ ಆದೇಶಿಸಿದ್ದಾರೆ.
ಅಂಜನಗೇರಿ ಸೀಲ್ಡೌನ್
ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಜನಗೇರಿಯ 25ಕ್ಕೂ ಹೆಚ್ಚು ಕುಟುಂಬಗಳ 51 ಮಂದಿಗೆ ಕೋವಿಡ್ ದೃಢೀಕೃತ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸೀಲ್ಡೌನ್ ಮಾಡಲಾಗಿದೆ.
ಮೊದಲು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದ್ದರಿಂದ ಅನುಮಾನಗೊಂಡು ಅಂಜನಗೇರಿಯ 300 ಕ್ಕೂ ಹೆಚ್ಚು ಜನರನ್ನು ತಪಾಸಣೆ ಮಾಡಲಾಗಿತ್ತು. ಆರಂಭದಲ್ಲಿ 15 ಮಂದಿಗೆ ಕೋವಿಡ್ ಪ್ರಕರಣಗಳು ದೃಢಪಟ್ಟಿತ್ತು. ಇದುವರೆಗೂ ಒಟ್ಟು 51 ಜನರಿಗೆ ಕೋವಿಡ್ ದೃಢಗೊಂಡಿದೆ.
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪರಿಶೀಲನೆ ನಡೆಸಿದ್ದಾರೆ. ಸೋಂಕು ದೃಢಪಟ್ಟಿರುವವರನ್ನು ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿಯನ್ನು ವಹಿಸಿದ್ದಾರೆ. ಅಲ್ಲದೆ ದೃಢಪಟ್ಟಿರುವ ಪ್ರಕರಣಗಳಲ್ಲಿ ಮಂದಿಗೆ ಹೆಚ್ಚಿನ ಹೆಚ್ಚಿನ ಆರೋಗ್ಯ ಸಮಸ್ಯೆ ಉಂಟಾಗಿಲ್ಲ. ಶೀರ್ಘದಲ್ಲಿ ಗುಣಮುಖಲಾಗಲಿದ್ದಾರೆ ಎಂದು ತಿಳಿಸಿದ್ದರು.