ಪಂಜಾಬ್ ಮುಖ್ಯಮಂತ್ರಿಯಾಗಿ ಚರಣಜಿತ್ ಸಿಂಗ್ ಚನ್ನಿ ಪ್ರಮಾಣ ವಚನ ಸ್ವೀಕಾರ

ಪಂಜಾಬ್ : ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ತೆರವಾಗಿದ್ದ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಪಂಜಾಬ್ ಕಾಂಗ್ರೆಸ್ ಅವಿರೋಧವಾಗಿ ನಾಯಕ ಚರಣಜಿತ್ ಸಿಂಗ್ ಚನ್ನಿ ಅವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

ಇದೇ ವೇಳೆ ಸುಖ್ವಿಂದರ್ ಸಿಂಗ್ ರಾಂಧವ ಮತ್ತು ಓಪಿ ಸೋನಿ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯ ಕಾಂಗ್ರೆಸ್ ನಲ್ಲಿನ ಬಿಕ್ಕಟ್ಟಿನ ನಡುವೆಯೇ ಸಿಧು ಆಪ್ತ ಚರಣಜಿತ್ ಚನ್ನಿ ಸೋಮವಾರ(ಸೆಪ್ಟೆಂಬರ್ 20) ಪಂಜಾಬ್ ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ಚನ್ನಿ ಪಂಜಾಬ್ ನ ಮೊದಲ ದಲಿತ ಮುಖ್ಯಮಂತ್ರಿ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.

ಮುಖ್ಯಮಂತ್ರಿ ಹುದ್ದೇ ತಿರಸ್ಕಾರ ಮಾಡಿದ ಅಂಬಿಕಾ ಸೋನಿ : ಕಾಂಗ್ರೆಸ್ ನ ಹಿರಿಯ ನಾಯಕಿ ಅಂಬಿಕಾ ಸೋನಿ ತಮಗೆ ಸಿಎಂ ಸ್ಥಾನ ಬೇಡ ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ನೀಡಿದ ಆಫರ್ ಅನ್ನು ನಿರಾಕರಿಸಿದ್ದಾರೆ. ಸಿಖ್ ಸಮುದಾಯದ ನಾಯಕನಿಗೆ ಸಿಎಂ ಪಟ್ಟವನ್ನು ಕಟ್ಟದಿದ್ದರೆ ಅದು ಮುಂದಿನ ಚುನಾವಣೆಯಲ್ಲಿ ಅಡ್ಡಪರಿಣಾಮ ಬೀರುವ ಅಪಾಯವಿದೆ ಎಂದು ಅಂಬಿಕಾ ಸೋನಿ ಕೇಂದ್ರ ನಾಯಕರಿಗೆ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.

ಅನುಭವಿ ರಾಜಕಾರಣ ಚೆನ್ನಿ : ಸಿಎಂ ಆಗಿ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಲಾಗಿದೆ.
ಮೂರು ಬಾರಿ ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿರುವ ಚರಣ್ಜೀತ್ ಅವರು ಪಂಜಾಬ್ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ತರಬೇತಿಯ ಮಂತ್ರಿಯಾಗಿದ್ದಾರೆ. ಪಂಜಾಬ್ ವಿಧಾನಸಭೆಯಲ್ಲಿ 2015 ರಿಂದ 2016 ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು.

ಚಾಮ್ಕೌರ್ ಸಾಹೀಬ್ ಕ್ಷೇತ್ರದ ಶಾಸಕರಾಗಿರುವ ಚರಣ್ಜೀತ್ ಅವರು ರಾಮ್ ದಾಸಿಯಾ ಸಿಖ್ ಸಮುದಾಯದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಚಮ್ಕೌರ್ ಸಾಹೀಬ್ ಕ್ಷೇತ್ರದ ಮಕ್ರೋನಾ ಕಲನ್ ಎಂಬ ಗ್ರಾಮದವರಾದ ಚರಣ್ಜೀತ್ ಅವರು ನಂತರ ಖರಾರ್ ಕಡೆಗೆ ವಲಸೆ ಬಂದರು. ಮುನ್ಸಿಪಲ್ ಕೌನ್ಸಿಲರ್ ಆಗಿ ಮೂರು ಬಾರಿ ಆಯ್ಕೆಯಾಗಿ ರಾಜಕೀಯದಲ್ಲಿ ಗುರುತಿಸಿಕೊಂಡರು.

ಪಂಜಾಬ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಐದು ತಿಂಗಳು ಬಾಕಿ ಇರುವಾಗಲೇ ನಾಯಕತ್ವದ ಪ್ರಶ್ನೆ ಎದುರಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಎನ್ನಬಹುದು. ಇದನ್ನು ಚರಣ್ ಜೀತ್ ಹೇಗೆ ನಿವಾರಿಸುತ್ತಾರೆ ಹಾಗೂ ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಯಾವರೀತಿ ಲಾಭವಾಗಬಹುದು ಕಾದು ನೋಡಬೇಕಿದೆ.

 

Donate Janashakthi Media

Leave a Reply

Your email address will not be published. Required fields are marked *