ಅಧಿವೇಶನದಲ್ಲಿ ಮತ್ತೆ ಪ್ರತಿಧ್ವನಿಸಿದ ‘ಬೆಲೆ ಏರಿಕೆ ಬಿಸಿ’

ಬೆಂಗಳೂರು (ವಿಧಾನಸಭೆ) : ವಿಧಾನಸಭೆ ಕಲಾಪದ ವೇಳೆ ಬೆಲೆ ಏರಿಕೆ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ವಾಕ್ಸಮರ, ವಾಗ್ದಾಳಿಗಳಿಗೆ ಕಾರಣವಾಗಿತ್ತು.

ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಉತ್ತರಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು ನಿಜ, ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಆದರೆ ಅದಕ್ಕೆ ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆಯಾಗಿರುವುದು ಮಾತ್ರ ಕಾರಣವಲ್ಲ, ಬೇರೆ ಬೇರೆ ಕಾರಣಗಳಿಂದ ಬೆಲೆ ಏರಿಕೆಯಾಗಿದೆ ಎಂದು ಸಮರ್ಥಿಸಿಕೊಂಡರು.

ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯರು ಬಿಜೆಪಿಯದ್ದು ಲೂಟಿ ಸರ್ಕಾರ ಎಂದು ಘೋಷಣೆ ಕೂಗಲು ಆರಂಭಿಸಿದರು. ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಧ್ವನಿಗೂಡಿಸಿ ‘ಬಿಜೆಪಿ ಲೂಟ್ ಸರ್ಕಾರ’ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ, ಜನಸಾಮಾನ್ಯರು ಪರದಾಡುತ್ತಿದ್ದರೂ ಪ್ರಧಾನಿ ಮೋದಿಗೆ ನೋವಾಗುತ್ತಿಲ್ಲ. ಜನರನ್ನು ಲೂಟಿ ಮಾಡುವುದರಲ್ಲಿ ಬಿಜೆಪಿ ನಾಯಕರು ತೊಡಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಲೂಟ್ ಸರ್ಕಾರ, ಬಿಜೆಪಿ ಲೂಟ್ ಸರ್ಕಾರ ಎಂದು ಕಾಂಗ್ರೆಸ್ ಶಾಸಕರು ಎದ್ದುನಿಂತು ಘೋಷಣೆ ಹಾಕುತ್ತಿದ್ದರು.

7 ವರ್ಷದಲ್ಲಿ ಡೀಸೆಲ್ ಮೇಲಿನ ತೆರಿಗೆ 9 ಪಟ್ಟು ಹೆಚ್ಚಾಗಿದೆ. ಇದರಿಂದಾಗಿ ಎಲ್ಲ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಕಚ್ಚಾತೈಲ ಆಮದು ಕಡಿಮೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಆದರೆ ಮೋದಿ 7 ವರ್ಷದ ಅವಧಿಯಲ್ಲಿ ಏನು ಮಾಡಿದರು? ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿಮೆ ಮಾಡಿ ಜನರ ಮೇಲಿನ ಹೊರೆ ಇಳಿಸಬೇಕು ಎಂದು ಒತ್ತಾಯಿಸಿದರು.

ಬೆಲೆ ಏರಿಕೆಯ ದುಷ್ಪರಿಣಾಮಗಳ ಬಗ್ಗೆ ಈ ಹಿಂದೆಯೂ ಪ್ರಸ್ತಾಪಿಸಿದ್ದೆ. ಬೆಲೆ ಏರಿಕೆ ಆಗಿರುವುದನ್ನು ಬೊಮ್ಮಾಯಿ ಸಹ ಒಪ್ಪಿದ್ದಾರೆ. ಈ ಹಿಂದೆ ಒಂದು ಲೀಟರ್ ಡೀಸೆಲ್ ಬೆಲೆ ₹  46 ಇತ್ತು. ಆದರೆ ಈಗ ಡೀಸೆಲ್ ಬೆಲೆ ₹  96 ಆಗಿದೆ. 7 ವರ್ಷಗಳಲ್ಲಿ ₹  60 ಹೆಚ್ಚಾಗಿದೆ. ಇದು ಜನಜೀವನದ ಮೇಲೆಯೂ ಪರಿಣಾಮ ಬೀರಿದೆ ಎಂದು ತಿಳಿಸಿದರು.

 

Donate Janashakthi Media

Leave a Reply

Your email address will not be published. Required fields are marked *