ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿದ ದಲಿತ ಹಕ್ಕುಗಳ ಸಮಿತಿ, ಕರ್ನಾಟಕ ರಾಜ್ಯ ಸಂಚಾಲಕರಾದ ಗೋಪಾಲಕೃಷ್ಣ ಹರಳಹಳ್ಳಿ ಮತ್ತು ಸಹ ಸಂಚಾಲಕರಾದ ಎನ್.ರಾಜಣ್ಣ ಬೇಟಿ ಮಾಡಿದ್ದರು.
ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿ ಗಂಗೂರು ಜೀತ ಮುಕ್ತ ದಲಿತರನ್ನು ಉಳುಮೆ ಮಾಡುತ್ತಿದ್ದ ಭೂಮಿಯಿಂದ ಒಕ್ಕೆಲೆಬ್ಬಿಸಿದೆ. ದಲಿತರು ಜೀವನ ಸಾಗಿಸಲು ಭೂಮಿ ಸಾಗುವಳಿ ಮಾಡಲು ಜಮೀನು ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದ ಆಡಳಿತ ಇದುವರೆಗೂ ಅಂದರೆ, ಕಳೆದ 27 ವರ್ಷಗಳಿಂದಲೂ ತನ್ನ ಭರವಸೆಗಳನ್ನು ಈಡೇರಿಸಿಲ್ಲ ಕೂಡಲೇ ಸರಕಾರ ಕ್ರಮವಹಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: ಜೀತವಿಮುಕ್ತ ದಲಿತರಿಗೆ ಭೂ ಸಾಗುವಳಿಗೆ ಜಮೀನು ಮಂಜೂರು ಮಾಡಬೇಕೆಂದು ಪ್ರತಿಭಟನೆ
ಭೂಹೀನ ದಲಿತರಿಗೆ ಕೃಷಿ ಭೂಮಿ ನೀಡಲು ಕೂಡಲೆ ಕ್ರಮಕೈಗೊಳ್ಳಬೇಕೆಂದು ಈಗಾಗಲೇ ಸರ್ಕಾರ ಹಾಗೂ ಹಾಸನ ಜಿಲ್ಲಾಡಳಿತ, ಅರಕಲಗೂಡು ತಾಲ್ಲೂಕು ಆಡಳಿತಕ್ಕೆ ಆಗ್ರಹಿಸಿ ಹಲವು ಭಾರಿ ಒತ್ತಾಯಿಸಿದ್ದರೂ ಯಾವುದೇ ಕ್ರಮವಹಿಸದ ಅಧಿಕಾರಿಗಳು ಜೀತದಿಂದ ವಿಮುಕ್ತರಾದವರಿಗೆ ಅನ್ಯಾಯ ಎಸಗಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ದಲಿತ ಹಕ್ಕುಗಳ ಸಮಿತಿ, ಕರ್ನಾಟಕ ದ ಮುಖಂಡರು ತಿಳಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ತಕ್ಷಣದಲ್ಲೆ ಹಾಸನಕ್ಕೆ ಬರುವುದಿದ್ದು, ಆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ಗಂಗೂರು ಜನರನ್ನು ಕರೆಸಿಕೊಂಡು ಬೇಟಿ ನೀಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.