ಪಂಜಾಬ್‌: ನಾಳೆ 15 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಚಂಡಿಗಡ: ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಸಂಪುಟದ ನೂತನ ಸಚಿವರುಗಳಾಗಲಿರುವ 15 ಮಂದಿಯನ್ನು ಅಂತಿಮಗೊಳಿಸಿದ್ದು, ನಾಳೆ ಸಂಜೆ 4.30ಕ್ಕೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂಬ ಮಾಹಿತಿ ಇದೆ.   ಅಂತಿಮಗೊಂಡವರ ಪಟ್ಟಿಯ ವಿವರಗಳನ್ನು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ವಿಷಯವನ್ನು ತಿಳಿಸಿದ್ದಾರೆ.

ಏಳು ಶಾಸಕರನ್ನು ಸೇರಿಸಿಕೊಳ್ಳುವಲ್ಲಿ ಹಾಗೂ  ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಸಂಪುಟದಲ್ಲಿದ್ದ ಐವರನ್ನು ಕೈಬಿಡುವಲ್ಲಿ ಪಕ್ಷವು ಒಮ್ಮತವನ್ನು ಸಾಧಿಸಲು ಸಾಧ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ: ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ!

ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಹರೀಶ್ ರಾವತ್, ಹರೀಶ್ ಚೌಧರಿ ಮತ್ತು ಅಜಯ್ ಮಾಕೆನ್ ಸಹ ಹಾಜರಿದ್ದರು. ಪಕ್ಷವು ಮಾಜಿ ಆರೋಗ್ಯ ಸಚಿವ ಬಲಬೀರ್ ಸಿಧು, ಕಂದಾಯ ಸಚಿವ ಗುರುಪ್ರೀತ್ ಸಿಂಗ್ ಕಾಂಗಾರ್, ಕೈಗಾರಿಕಾ ಸಚಿವ ಸುಂದರ್ ಶಾಮ್ ಅರೋರಾ, ಸಮಾಜ ಕಲ್ಯಾಣ ಸಚಿವ ಸಾಧು ಸಿಂಗ್ ಧರ್ಮಸೋಟ್ ಹಾಗೂ  ಕ್ರೀಡಾ ಸಚಿವ ರಾಣಾ ಗುರ್ಮಿತ್ ಸಿಂಗ್ ಸೋಧಿ ಅವರನ್ನು ಕೈಬಿಡಲು ನಿರ್ಧರಿಸಿದೆ.

ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಅವರ ಕೆಲವು ನಿಷ್ಠಾವಂತರಾದ ಬ್ರಹ್ಮ ಮೊಹಿಂದ್ರಾ, ವಿಜೇಂದ್ರ ಸಿಂಗ್ಲಾ ಮತ್ತು ಭರತ್ ಭೂಷಣ್ ಅಶು ಅವರು ಸಚಿವರಾಗಲಿದ್ದಾರೆ.

ನಿನ್ನೆ ರಾತ್ರಿ ಅಂತಿಮಗೊಳಿಸಿದ ಇತರರಲ್ಲಿ ಪಿಪಿಸಿಸಿ ಪ್ರಧಾನ ಕಾರ್ಯದರ್ಶಿ ಪರ್ಗತ್ ಸಿಂಗ್, ಪಿಪಿಸಿಸಿ ಕಾರ್ಯಾಧ್ಯಕ್ಷ, ಕುಲ್ಜಿತ್ ನಾಗ್ರಾ ಹಾಗೂ ಗಿಡ್ಡೇರ್ಬಾಹಾ ಶಾಸಕ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರಿದ್ದಾರೆ. ಇವರೆಲ್ಲರೂ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಆಯ್ಕೆಗಳು ಎನ್ನಲಾಗಿದೆ.

Donate Janashakthi Media

Leave a Reply

Your email address will not be published. Required fields are marked *