ಯಲಹಂಕ: ಶಿವರಾಮ ಕಾರಂತ ಬಡಾವಣೆಗೆ ಸುಮಾರು 3500 ಎಕರೆ ಭೂ ಸ್ವಾಧೀನಕ್ಕೆ ಮುಂದಾಗಿರುವ ಬಿಡಿಎ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆದಿದೆ. ಇದೇ ವೇಳೆ ಧರಣಿ ನಿರತ ರೈತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಶಿವರಾಂ ಕಾರಂತ ಬಡಾವಣೆಗಾಗಿ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲೂಕಿನ 17 ಗ್ರಾಮಗಳ ರೈತರಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು,. ಬಿಳಿ ಪಂಚೆ ಶಾಲು,ಟೋಪಿ ಮತ್ತು ಕೋಲಿನೊಂದಿಗೆ- ಗಾಂಧೀಜಿಯ ವೇಷ ಧರಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರಾಮಗೊಂಡನಹಳ್ಳಿಯಲ್ಲಿ ಧರಣಿನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯಲಹಂಕದ ಕೆಂಪೇಗೌಡ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ರೈತರು ಪಾದಯಾತ್ರೆ ನಡೆಸಿದರು. ಭೂಸ್ವಾಧೀನವನ್ನು ಕೈಬಿಡುವಂತೆ ಸಿಎಂಗೆ ಮನವಿ ಸಲ್ಲಿಸಿರುವ ರೈತರು, ಮನವಿಗೆ ಸ್ಪಂದಿಸದೆ ಇದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.