ವಿಜಯಪುರ/ಹಾವೇರಿ: ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ನಡೆಯಲಿರುವ ಉಪಚುನಾವಣೆಯಲ್ಲಿ ಜನತಾದಳ (ಜಾತ್ಯತೀತ)-ಜೆಡಿ(ಎಸ್) ಪಕ್ಷದ ಎರಡು ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ ಪಕ್ಷ ಹಾನಗಲ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಾಮಪತ್ರ ಸಲ್ಲಿಸಿದರೆ, ಜೆಡಿ(ಎಸ್) ಪಕ್ಷದಿಂದ ನಿಯಾಜ್ ಶೇಖ್ ನಾಮಪತ್ರ ಸಲ್ಲಿಸಿದರು.
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀನಿವಾಸ್ಮಾನೆ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ಖಂಡ್ರೆ ಸೇರಿದಂತೆ ಅನೇಕ ನಾಯಕರು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ವೇಳೆ ಹಾಜರಿದ್ದರು.
ಇದನ್ನು ಓದಿ: ಉಪಚುನಾವಣೆ: ಹಾನಗಲ್-ಸಿಂಧಗಿ ಕ್ಷೇತ್ರಗಳಿಗೆ ಅ.30ರಂದು ಮತದಾನ
ಸಿಂದಗಿ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ನಾಝಿಯಾ ಶಕೀಲ್ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ.
ಸಿಂದಗಿಯಲ್ಲಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಂಡೆಪ್ಪ ಕಾಶಂಪುರ, ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಹಲಸಂಗಿ, ಐ.ಜಿ.ಬಿರಾದಾರ ಇದ್ದರು.
ಹಾನಗಲ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.
ರಾಜ್ಯದಲ್ಲಿ ನಡೆಯಲಿರುವ ಎರಡು ವಿಧಾನಸಭೆ ಉಪಚುನಾವಣೆಗೆ ಈಗಾಗಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ತಮ್ಮ ಅಭ್ಯರ್ಥಿಗಳ ಹೆಸರು ಘೋಷಿಸಿ ಅಧಿಕೃತವಾಗಿ ಕಣಕ್ಕಿಳಿಸಿದೆ.
ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.