ಬೆಂಗಳೂರು: ‘ಬಸವರಾಜ ಬೊಮ್ಮಾಯಿ ಅವರೇ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಪೊಲೀಸರ ದಿರಿಸು ಬದಲಾವಣೆ ಮಾಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ’ ಎಂದು ಟೀಕಿಸಿದ್ದಾರೆ.
‘ಮುಖ್ಯಮಂತ್ರಿಗಳ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದು, ಪೊಲೀಸರು ದಿರಿಸು ಬದಲಿಸಿ ತೆಗೆಸಿಕೊಂಡ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.
‘ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ’ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಸರ್ಕಾರ ಇದೆಯೇ? : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ‘ಒಂದೆಡೆ ಅಮಾಯಕ ಯುವಕ- ಯುವತಿಯರ ಮೇಲೆ ಅನೈತಿಕ ಪೊಲೀಸ್ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಇದಕ್ಕೆಲ್ಲ ಮುಖ್ಯಮಂತ್ರಿಗಳ ಬಹಿರಂಗ ಬೆಂಬಲ. ರಾಜ್ಯದಲ್ಲಿ ಸರ್ಕಾರ ಇದೆಯೇ?’ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ @CMofKarnataka?
ಅವರ ಕೈಗೆ ತ್ರಿಶೂಲಗಳನ್ನೂ
ಕೊಟ್ಟು
ಹಿಂಸೆಯ
ದೀಕ್ಷೆ ಕೊಟ್ಟು ಬಿಡಿ.ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು.
1/4 pic.twitter.com/jNtFADb8Rc— Siddaramaiah (@siddaramaiah) October 17, 2021
ಮನೆಯೊಳಗೆ ಇರುವುದು ಕ್ಷೇಮ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ‘ಗೂಂಡಾಗಿರಿಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿದ ಮುಖ್ಯಮಂತ್ರಿಗಳು ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ, ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ’ ಎಂದು ಸರ್ಕಾರವನ್ನು ಟೀಕಿಸಿದ್ದಾರೆ.
‘ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ ಮುಖ್ಯಮಂತ್ರಿಗಳೇ. ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.