ಬೆಂಗಳೂರು: : ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಫೇಸ್-2 ಕಾಮಗಾರಿ ವೇಳೆ 40 ಅಡಿ ಎತ್ತರದಿಂದ ಕ್ರೇನ್ ಬಿದ್ದಿದ್ದು, ಭಾರೀ ಅನಾಹುತ ತಪ್ಪಿದೆ.
ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ಜೋಡಣೆ ವೇಳೆ ಈ ಘಟನೆ ಸಂಭವಿಸಿದ್ದು ಬೆಳಗ್ಗೆ 6.30ರ ಸುಮಾರಿಗೆ ಕ್ರೇನ್ ಕೆಳಗೆ ಬಿದ್ದಿದೆ. ಸದ್ಯ ಕರ್ತವ್ಯನಿರತ ನೂರಾರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಲ್ಕ್ ಬೋರ್ಡ್-ಕೆ.ಆರ್.ಪುರಂ ಮಾರ್ಗವಾಗಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ವೇಳೆ ಅಸಂಬಲ್ ಜೋಡಿಸುವಾಗ ಲಾಂಚಿಂಗ್ ಗಾರ್ಡ್ ಎಂಬ ಬೃಹತ್ ಮಷೀನ್ ದಿಢೀರ್ ಕುಸಿದು ಕೆಳಗೆಬಿದ್ದಿದೆ. ಮಷೀನ್ ಅರ್ಧಕ್ಕೆ ಕಟ್ ಆಗಿದೆ. ಮಷೀನ್ ಮೇಲೆತ್ತಲು ಕಾರ್ಮಿಕರು ಹರಸಾಹಸ ಪಡುತ್ತಿದ್ದಾರೆ.
ಘಟನೆ ನಡೆದು 6 ಗಂಟೆ ಕಳೆದರೂ ಇದುವರೆಗೂ ಸ್ಥಳಕ್ಕೆ ಯಾವೊಬ್ಬ ಮೆಟ್ರೋ ಅಧಿಕಾರಿಯೂ ಭೇಟಿ ನೀಡಿಲ್ಲ. ಹೀಗೆ ಬಹುದೊಡ್ಡ ಮಿಷಿನ್ ಒಂದು ಕೆಳಗೆ ಬಿದ್ದು, ದೊಡ್ಡ ಅವಾಂತರವೇ ಉಂಟಾಗಿದ್ದರೂ, ಅಧಿಕಾರಿಗಳು ಸ್ಥಳಕ್ಕೆ ಬರದಿರುವ ಕುರಿತು ಕಾರ್ಮಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದೀಗ ಕಾಮಗಾರಿ ನಿರತ ಕಾರ್ಮಿಕರೇ ಮಿಷಿನ್ ಮೇಲೆ ಎತ್ತಿಡುವಂತ ಕೆಲಸದಲ್ಲಿ ನಿರತರಾಗಿದ್ದಾರೆ.