ಕನ್ನಡ ರಾಜ್ಯೋತ್ಸವ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಕೋಲಾರ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಾಗೂ ಹಾಸ್ಟೆಲ್ ಗಳಲ್ಲಿ ವಿಧ್ಯಾರ್ಥಿಗಳಿಗೆ ವಿವಿಧ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ನವೆಂಬರ್ 1ರಂದು ನಗರದ ಗಾಂಧಿವನದಲ್ಲಿ ವೇದಿಕೆ ಕಾರ್ಯಕ್ರಮದ ಮೂಲಕ ಸರಳವಾಗಿ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕೊರೊನಾ ಜಿಲ್ಲೆಯಲ್ಲಿ ಕಡಿಮೆಯಾಗಿದ್ದರು ಸರಕಾರದ ನಿಯಮಗಳನ್ನು ಪಾಲಿಸಬೇಕಾಗಿದೆ ಅ ನಿಟ್ಟಿನಲ್ಲಿ ಸರಳವಾಗಿ ವಿಧ್ಯಾರ್ಥಿಗಳಿಗೆ ರಾಜ್ಯೋತ್ಸವದ ಹೆಸರಿನಲ್ಲಿ ಹೊಸ ಆಲೋಚನೆಗಳನ್ನು ತರಬೇಕಾಗಿದೆ ಸಂಬಂಧಿಸಿದ ಶಾಲಾ ಕಾಲೇಜು ಹಾಗೂ ಬಿಸಿಎಂ ಸಮಾಜ ಕಲ್ಯಾಣ, ರೆಸಿಡೆನ್ಸಿ ಹಾಸ್ಟೆಲ್ ಗಳಲ್ಲಿ ಕಡ್ಡಾಯವಾಗಿ ಆಯೋಜಿಸಬೇಕು ಎಂದು ಸೂಚಿಸಿದರು.

ಇದನ್ನು ಓದಿ: ರಾಜ್ಯೋತ್ಸವ ವಿಶೇಷ: ವಿದ್ಯಾರ್ಥಿಗಳಿಗೆ ‘ಕನ್ನಡವನ್ನು ಬೆಳೆಸಲು ನಾನೇನು ಮಾಡುತ್ತೇನೆ?’ ಸ್ಪರ್ಧೆ

ಪ್ರತಿ ವರ್ಷ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿತ್ತು. ಆದರೆ‌ ಕೋವಿಡ್‌ ಆತಂಕ ಇರುವುದರಿಂದ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಈ ಬಾರಿ ವೇದಿಕೆ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಸನ್ಮಾನದ ಜೊತೆಗೆ ಪ್ರಶಸ್ತಿ ನೀಡಬೇಕು ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕು ಅಕ್ಟೋಬರ್ 28 ರಂದು ಸಾಮೂಹಿಕ ತರಬೇತಿ ಗಾಯನವನ್ನು ಹಮ್ಮಿಕೊಳ್ಳಲಾಗಿದೆ ನವೆಂಬರ್ ಕೊನೆಯ ವಾರ ಕನ್ನಡ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ  ಎಂದರು

ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಕೆ.ಆರ್ ತ್ಯಾಗರಾಜ್ ಮಾತನಾಡಿ ಪ್ರತಿ ವರ್ಷ ಜಿಲ್ಲಾಡಳಿತ ಮತ್ತು ಭುವನೇಶ್ವರಿ ಕನ್ನಡ ಸಂಘದ ನೇತೃತ್ವದಲ್ಲಿ ನಗರದ ಗಾಂಧಿವನದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಾ ಇದ್ದು ಕೊರೊನಾ ಜಿಲ್ಲೆಯಲ್ಲಿ ಕಡಿಮೆಯಾಗಿದೆ ನಮ್ಮಲ್ಲಿ ಕೂಡ ಮೆರವಣಿಗೆ ಸಮೇತವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಮನವಿ ಮಾಡಿದರು

ಕಸಾಪ ಮಾಜಿ ಅಧ್ಯಕ್ಷ ಜೆ.ಜಿ ನಾಗರನಾದೇಮಾಡಿದರು ಶಾಲಾ ಮಕ್ಕಳಿಗೆ ಪ್ರಾರಂಭದಲ್ಲಿಯೇ ಸಾಹಿತ್ಯ ಸಂಬಂಧಗಳನ್ನು ಬೆಳಸಬೇಕು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪೇರಣೆ ನೀಡಬೇಕಾಗಿದೆ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವಂತೆ ಆದೇಶಿಸಬೇಕು ಎಂದು ಮನವಿ ಮಾಡಿದರು

ಕನ್ನಡಪರ ಸಂಘಟನೆಗಳ ಒಕ್ಕೂಟದ ಕೋ.ನಾ ಪ್ರಭಾಕರ್ ಮಾತನಾಡಿ ನಗರದಲ್ಲಿ ಸೇರಿದಂತೆ ಜಿಲ್ಲೆಯಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸಬೇಕು ನಗರದ ಒಳಾಂಗಣ ಕ್ರೀಡಾಂಗಣಕ್ಕೆ ಡಾ ರಾಜಕುಮಾರ ಹೆಸರು ಇಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು

ಸಭೆಯಲ್ಲಿ ಭುವನೇಶ್ವರಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಹೊನ್ನುಡಿ ಪ್ರಭಾಕರ್, ಮಾಜಿ ಪ್ರಧಾನ ಕಾರ್ಯದರ್ಶಿ ಅಂಚೆ ಅಶ್ವಥ್, ಮಾಜಿ ಖಜಾಂಚಿ ಶಿ.ನಾ.ಪ್ರಕಾಶ್ ,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುನಿರಾಜು,ಗೋಪಿನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ರವಿಕುಮಾರ್, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ನಾಗಾನಂದ್ ಕೆಂಪರಾಜು, ಡಿ.ಆರ್.ರಾಜಪ್ಪ, ಕನ್ನಡ ಪರ ಸಂಘಟನೆಗಳ ಮುಖಂಡರುಗಳು,ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *