ಕೋವಿಡ್ ಬೂಸ್ಟರ್ ಡೋಸ್ ನೀಡಲು ಶಿಬಿರಗಳ ಸ್ಥಾಪನೆ: ಗೌರವ್ ಗುಪ್ತಾ

ಬೆಂಗಳೂರು: ನಗರದಲ್ಲಿ ಬೂಸ್ಟರ್ ಡೋಸ್ ನೀಡಲು ಶಿಬಿರಗಳನ್ನು ಸ್ಥಾಪಿಸಲಾಗುತ್ತದೆ. ಈ ಕೇಂದ್ರಗಳಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಕೊರೋನಾ ಸೋಂಕು ಹೆಚ್ಚಾಗದಂತೆ ತಡೆಯಲು ಗರಿಷ್ಠ ಸಂಖ್ಯೆಯ ಜನರನ್ನು ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುವಂತೆ ಮಾಡಲು ಈ ರೀತಿಯ ಕ್ರಮವನ್ನು ಕೈಗೊಳ್ಳಲಾಗಿದೆ. ಅಗತ್ಯವಾದಷ್ಟು ಡೋಸ್ ಲಭ್ಯವಿರುವುದಾಗಿ ಅವರು ತಿಳಿಸಿದರು.

ಕೋವಿನ್ ಪೋರ್ಟಲ್ ಪ್ರಕಾರ, ಜನವರಿ 10 ರಿಂದ ಫೆಬ್ರವರಿ 10ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ  10, 1,03,163 ಆರೋಗ್ಯ ಕಾರ್ಯಕರ್ತರು, 40,000 ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ 2,87,802 ಜನರಿಗೆ ಹಂತ ಹಂತವಾಗಿ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.

ಸೋಂಕು ಹೆಚ್ಚಳಗೊಳ್ಳುತ್ತಿದ್ದು, ಪ್ರತಿಯೊಬ್ಬರು ಲಸಿಕೆ ಪಡೆಯಬೇಕು, ಮಾಸ್ಕ್ ಧರಿಸಬೇಕು ಎಂದು ಗೌರವ್ ಗುಪ್ತಾ ಹೇಳಿದರು. ಇನ್ನೂ ಹೆಚ್ಚಿನ ಕ್ರಮ ಕುರಿತು ತಜ್ಞರು ಹಾಗೂ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಸಮಾಲೋಚನೆ ಬಳಿಕ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆಯಿರುವುದಾಗಿ ತಿಳಿಸಿದರು.

ಪರಿಸ್ಥಿತಿ ನಿರ್ವಹಣೆಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಬೆಡ್ ವ್ಯವ್ಥಸ್ಥೆ ಮಾಡಲಾಗಿದೆ. ಸರ್ಕಾರ ಶಿಫಾರಸು ಮಾಡುವ ರೋಗಿಗಳಿಗೆ ಬೆಡ್ ಮೀಸಲು ವ್ಯವಸ್ಥೆ ಮಾಡುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜಿಗೆ ಸೂಚಿಸಲಾಗಿದೆ. ಪ್ರಸ್ತುತ ಸುಮಾರು 100 ಆಸ್ಪತ್ರೆಗಳಲ್ಲಿ ದಾಖಲಾಗಬಹುದು, ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಎಂಟು ವಲಯಗಳಲ್ಲಿ ವಾರ್ ರೂಮ್ ಸ್ಥಾಪಿಸಲಾಗಿದೆ ಎಂದು ಹೇಳಿದರು.

28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಂಟ್ರೋಲ್ ರೂಂಗಳಿವೆ. 198 ವಾರ್ಡುಗಳಲ್ಲಿಯೂ ಸಂಚಾರಿ ಪರೀಕ್ಷಾ ಘಟಕವಿದೆ. ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಗೌರವ್ ಗುಪ್ತಾ ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *