ಬೆಂಗಳೂರು: ಕರ್ನಾಟದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರವು ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕೋವಿಡ್ ಸಂದರ್ಭದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ, ಧರಣಿಗೆ ಅವಕಾಶ ನೀಡಬಾರದು. ಕೋವಿಡ್ ಅವಧಿಯ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಮೇಕೆದಾಟು ಪಾದಯಾತ್ರೆ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್ನಲ್ಲಿ ನಡೆಯಿತು.
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಮಾಹಿತಿ ನೀಡಿದ್ದಾರೆ. ಜತೆಗೆ ಬೇರೆ ಪಕ್ಷಗಳ ಕಾರ್ಯಕ್ರಮ ನಡೆಯುತ್ತಿವೆ. ಸರ್ಕಾರದ ತಾರತಮ್ಯ ಧೋರಣೆ ಪರಿಗಣಿಸಿ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯವು ಕಾಂಗ್ರೆಸ್ ನಾಯಕರು ಕೊರೊನಾ ನಿಮಯಗಳನ್ನು ಗಾಳಿಗೆ ತೂರಿ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದರು. ಈ ನಡುವೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಅನೇಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸುವಂತೆ ತಿಳಿಸಿತ್ತು.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದ ಉಚ್ಛ ನ್ಯಾಯಾಲಯವು ಸಮಾರಂಭ ತಡೆಗೆ ಸರ್ಕಾರದ ಕ್ರಮಗಳೇನು? ಎಲ್ಲಾ ರಾಜಕೀಯ ಪಕ್ಷಗಳಿಗೂ ಇದು ಅನ್ವಯವಾಗಬೇಕಲ್ಲವೇ ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದೆ. ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರು ಎಲ್ಲಾ ರಾಜಕೀಯ ಪಕ್ಷಗಳಿಗೂ ಸರ್ಕಾರದ ಕೋವಿಡ್ ನಿಯಾಮವಳಿಗಳು ಅನ್ವಯವಾಗುತ್ತದೆ. ಯಾವ ರಾಜಕೀಯ ಪಕ್ಷಗಳೂ ನಿಯಮ ಮೀರಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.