ರೈಲಿನಲ್ಲಿ ಹಿಂದೂ ಮಹಿಳೆಯ ಜೊತೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಹುಡುಗನ ಮೇಲೆ ಬಜರಂಗದಳದ ಕಾರ್ಯಕರ್ತರಿಂದ ಹಲ್ಲೆ

ಭೋಪಾಲ್ : ರೈಲಿನಲ್ಲಿ ಜತೆಯಾಗಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ ಮಹಿಳೆಯನ್ನು ಭಜರಂಗದಳದ ಸದಸ್ಯರು ಅಜ್ಮೀರ್‌ಗೆ ಹೋಗುವ ರೈಲಿನಿಂದ ಬಲವಂತವಾಗಿ ಕೆಳಗಿಳಿಸಿ ಅವರ ಮೇಲೆ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ.

ಇದು ‘ಲವ್ ಜಿಹಾದ್’ ಎಂದು ಆರೋಪಿಸಿ ಭಜರಂಗದಳದ ಸದಸ್ಯರು ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ. “ಇಂದೋರ್‌ ಮೂಲದ ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ ಮಹಿಳೆ ಕುಟುಂಬ ಸ್ನೇಹಿತರಾಗಿದ್ದಾರೆ.

ಜನವರಿ 14 ರಂದು ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಸಣ್ಣ ಎಲೆಕ್ಟ್ರಾನಿಕ್ ಅಂಗಡಿಯ ಮಾಲಕ ಆಸಿಫ್ ಶೇಖ್ ಎಂದು ಗುರುತಿಸಲಾಗಿದ್ದು, ಮಹಿಳೆ ಖಾಸಗಿ ಶಾಲಾ ಶಿಕ್ಷಕಿಯಾಗಿದ್ದಾರೆ.

ವೀಡಿಯೊದಲ್ಲಿ, ಮಹಿಳೆಯು ಬಜರಂಗದಳದ ಕಾರ್ಯಕರ್ತರ ಮೇಲೆ ಕಿಡಿಕಾರುತ್ತಿರುವುದು ಕಂಡುಬಂದಿದೆ. ‘ನಿಮ್ಮ ಒಂದು ತಪ್ಪು ತಿಳುವಳಿಕೆ ನನ್ನ ಜೀವನವನ್ನು ಹಾಳುಮಾಡಬಹುದು. ನಾನು ವಯಸ್ಕೆ, ನಾನು ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತೇನೆ, ನಾನು ಮಕ್ಕಳಿಗೆ ಕಲಿಸುತ್ತೇನೆ,’ ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಜಿಆರ್‌ಪಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಗುಪ್ತಾ ಮಾತನಾಡಿ, ಶೇಖ್ ಮತ್ತು ಮಹಿಳೆ ಕುಟುಂಬದ ಸ್ನೇಹಿತರಾಗಿದ್ದು, ವರ್ಷಗಳಿಂದ ಪರಸ್ಪರ ಪರಿಚಿತರು. ‘ಲವ್ ಜಿಹಾದ್’ ಎಂದು ಆರೋಪಿಸಿ ಭಜರಂಗದಳದ ವ್ಯಕ್ತಿಗಳು ಅವರನ್ನು ಪೊಲೀಸ್ ಠಾಣೆಗೆ ಕರೆತಂದ ನಂತರ, ನಾವು ಅವರ ಹೇಳಿಕೆಗಳನ್ನು ದಾಖಲಿಸಿದ್ದೇವೆ ಮತ್ತು ಅವರಿಬ್ಬರೂ ವಯಸ್ಕರಾಗಿದ್ದರಿಂದ ಮತ್ತು ಯಾವುದೇ ದೂರು ಇಲ್ಲದ ಕಾರಣ ಅವರನ್ನು ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಭಜರಂಗದಳದ ಕಾರ್ಯಕರ್ತರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ‘ಪೊಲೀಸ್ ಠಾಣೆಗೆ ಕರೆತರುವಾಗ ವ್ಯಕ್ತಿಯ ಮೇಲೆ ದೌರ್ಜನ್ಯ ನಡೆದಿದೆ ಎಂದು ನಮಗೆ ತಿಳಿದಿರಲಿಲ್ಲ ಮತ್ತು ಇಬ್ಬರೂ ನಮಗೆ ಹೇಳಲಿಲ್ಲ. ಭಜರಂಗದಳದವರ ವಿರುದ್ಧ ಯಾವುದೇ ದೂರು ಇಲ್ಲದ ಕಾರಣ, ನಾವು ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಗುಪ್ತಾ ಹೇಳಿದ್ದಾರೆ.

ಈ ರೀತಿ ಓಡಾಡುವವರ ಮೇಲೆ ಬಜರಂಗದಳ, ವಿಎಚ್ಪಿ, ಆರ್ ಎಸ್ ಎಸ್ ನವರು ದೌರ್ಜನ್ಯ ನಡೆಸುವ ಮೂಲಕ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಈ ರೀತಿ ದೌರ್ಜನ್ಯ ನಡೆಸುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕಿದೆ.

Donate Janashakthi Media

Leave a Reply

Your email address will not be published. Required fields are marked *