ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ನಾಲ್ಕನೇ ಬಜೆಟ್ ಇದಾಗಿದ್ದು, ಪಂಚರಾಜ್ಯಗಳ ಚುನಾವಣೆ ನಡುವೆ ಮಂಡನೆಯಾಗುತ್ತಿರುವ ಈ ಬಜೆಟ್ ಸಹಜವಾಗಿಯೇ ಎಲ್ಲ ವರ್ಗದ ಜನತೆಯ ಕುತೂಹಲಕ್ಕೆ ಕಾರಣವಾಗಿದೆ.
ಮಹಾಮಾರಿ ಕೊರೊನಾ ಕಳೆದ ಮೂರು ವರ್ಷಗಳಿಂದ ಜನಸಾಮಾನ್ಯರನ್ನು ಆರ್ಥಿಕವಾಗಿ ಹೈರಾಣು ಮಾಡಿದ್ದು, ಇದರ ಮಧ್ಯೆ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಜನಸಾಮಾನ್ಯರಿಗೆ ಬಿಗ್ ರಿಲೀಫ್ ಸಿಗಬಹುದು ಎಂದು ಭಾವಿಸಲಾಗಿತ್ತು. ಆದರೆ ಸಾಮಾನ್ಯ ಜನರಿಗೆ ಸಾಕಷ್ಟು ನಿರಾಸೆಯಾಗಿದ್ದು, ಉಳ್ಳವರ ಪರ ಬಜೆಟ್ ಎಂದು ಆರೋಪಿಸಲಾಗುತ್ತಿದೆ.
ಇದನ್ನೂ ಓದಿ : ಕೇಂದ್ರ ಬಜೆಟ್ 2022 ರ ಮುಖ್ಯಾಂಶಗಳು
ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ ಆಗಿದೆ. ಈ ಬಾರಿಯ ಬಜೆಟ್ನಲ್ಲಿ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ಇಲ್ಲಿ ಗಮನಾರ್ಹ ಸಂಗತಿಯಾಗಿದೆ.
ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಸಿಹಿಗಿಂತ ಕಹಿ ಸಿಕ್ಕಿದೆ ಜಾಸ್ತಿ. ಪ್ರಮುಖವಾಗಿ ಯಾವೆಲ್ಲಾ ವಸ್ತುಗಳ ಬೆಲೆ ಕಡಿತವಾಗಿದೆ? ಮತ್ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದು ಇಲ್ಲಿ ಮುಖ್ಯವಾಗುತ್ತದೆ. ಆ ಪಟ್ಟಿಯನ್ನು ನೋಡುವುದಾದರೆ,
ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ಚಿನ್ನ, ವಜ್ರಾಭರಣಗಳು
ಎಲೆಕ್ಟ್ರಾನಿಕ್ಸ್ ಉಪಕರಣಗಳು
ಮೊಬೈಲ್, ಮೊಬೈಲ್ ಚಾರ್ಜರ್ಗಳು
ಕೃಷಿ ಉಪಕರಣಗಳು
ವಿದೇಶಿ ಉತ್ಪನ್ನಗಳು
ಬಟ್ಟೆ, ಚಪ್ಪಲಿ, ಚರ್ಮದ ಉತ್ಪನ್ನಗಳು
ಯಾವುದೆಲ್ಲಾ ತುಟ್ಟಿ?
ಇಂಧನ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ, ಅನ್ ಬ್ಲೆಂಡೆಡ್ ಇಂಧನಕ್ಕೆ 2 ರೂ. ಹೆಚ್ಚುವರಿ ತೆರಿಗೆ ವಿಧಿಸಲಾಗಿದೆ. ಹಾಗಾಗಿ ಇವುಗಳ ಬೆಲೆ ಏರಿಕೆ ಆಗುವ ಸಂಭವ ಇದೆ.