ರಾಷ್ಟ್ರದ ಐಕ್ಯತೆಗೆ ಧಕ್ಕೆ ತರುತ್ತಿರುವ ಕೋಮುವಾದಿ ಶಕ್ತಿಗಳನ್ನು ಹಿಮ್ಮೆಟ್ಟಿಸಲು ವಿದ್ಯಾರ್ಥಿಗಳು ಕರೆ

ಗಂಗಾವತಿ: ರಾಜ್ಯದ ದೇಶದ ಅಭಿವೃದ್ಧಿಗಾಗಿ ಶಿಕ್ಷಣ ಸಂಸ್ಥೆಗಳು ಒಳ್ಳೆಯ ವಾತಾವರಣ ನಿರ್ಮಾಣ ಮಾಡವು ಜಾಗದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ  ಶಾಲುಗಳಿಂದ ಹದಗೆಡುತ್ತಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೋಮು ಪ್ರಚೋದನಾ ಶಕ್ತಿಗಳಿಗೆ ಒಳಗಾಗದೇ ಶೈಕ್ಷಣಿಕ ವಾತಾವರಣ ಹದಗೆಡಲು ಬಿಡಬಾರದೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಜ್ಯ ಅಧ್ಯಕ್ಷ ಅಮರೇಶ ಕಡಗದ ಹೇಳಿದರು.

ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಎಸ್‌ಎಫ್‌ಐ ಕಾರ್ಯಾಲಯದ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಹೆಮ್ಮೆಯ ಸಂಕೇತ ಐಕ್ಯತೆ ತ್ರಿವರ್ಣ ರಾಷ್ಟ್ರ ಧ್ವಜವನ್ನು ಹಿಡಿದು ನಾವೆಲ್ಲರೂ ಐಕ್ಯತೆಯಿಂದ ಹೋರಾಟ ಮಾಡವುದರ ಮೂಲಕ ಈ ರಾಜ್ಯದಲ್ಲಿ ಹಿಂದೂ-ಮುಸ್ಲಿಂ ಬಾಯಿ ಬಾಯಿ ಎಂಬ ಸಂದೇಶವನ್ನು ಸಾರುಬೇಕು ಎಂದು ಕರೆ ನೀಡಿದರು.

ಕುವೆಂಪು, ಭಗತ್ ಸಿಂಗ್, ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಕನಕದಾಸ, ಸಂತ ಶಿಶುನಾಳ ಶರೀಫರು, ಗುರು ಗೋವಿಂದ ಭಟ್ಟರ, ನಾರಯಣಗುರು, ಬಸವಣ್ಣ, ಅನೇಕ ಮಹಾನ್ ವ್ಯಕ್ತಿಗಳು ಸಾಧು-ಸಂತರ ದೇಶಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡುವುದರ ಮೂಲಕ ರಾಜ್ಯವನ್ನು ಐಕ್ಯತೆಯಿಂದ ಕಟ್ಟಿದ್ದಾರೆ. ಅನೇಕ ಮಹಾನ್ ವ್ಯಕ್ತಿಗಳ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ಹಿಂದೂ-ಮುಸ್ಲಿಂ, ಸಿಖ್ಖ್, ಜೈನ್ ಬೌದ್ಧರು ಎಲ್ಲರೂ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ರಾಜ್ಯದಲ್ಲಿಯೂ ವಚನ ಸಾಹಿತ್ಯ, ಭಕ್ತಿ ಚಳುವಳಿಯಿಂದ ಅನೇಕರು ಸಾಮಾಜಿಕ ಚಳವಳಿಯ ಮೂಲಕ ಈ ನಾಡನ್ನು ಕಟ್ಟಿದ್ದಾರೆ. ನಾವು ಎಲ್ಲಾರು ಒಂದೇ ಎಂಬ ಐಕ್ಯತೆಯ ಮಂತ್ರದಿಂದ ಕಟ್ಟಿ ಬೆಳೆಸಬೇಕಾಗಿದೆ ಎಂದು ಹೇಳಿದರು.

ಕೋಮುವಾದಿ ಶಕ್ತಿಗಳು ತಮ್ಮ ಹಿಡನ್ ಅಜೆಂಡಾವನ್ನು ರಾಜಕೀಯವಾಗಿ ಪರಿವರ್ತನೆ ಮಾಡಿ ಏನೂ ಅರಿಯದ ಶಿಕ್ಷಣ ಕಲಿಯುವ ಮಕ್ಕಳಲ್ಲಿ ಕೋಮುವಾದದ ವಿಷಬೀಜ ಬಿತ್ತುವ ಮೂಲಕ ರಾಜ್ಯವನ್ನು ಒಡೆದು ಆಳುವ ಕೆಲಸ ಸರಕಾರವೇ ಮಾಡುತ್ತಿರುವುದು ದುರಂತ. ರಾಜ್ಯದಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸಿಕೊಂಡು ಬರುತ್ತಿರುವುದು ಇದು ಮೊದಲೇನಲ್ಲ, ಈಗಾಗಲೇ ಸುಮಾರು ವರ್ಷಗಳಿಂದ ಅವರು ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಅಷ್ಟೇ ಅಲ್ಲ ಇತ್ತೀಚಿಗೆ ಹಿಂದು ಸಮಾಜದ ಹೆಣ್ಣು ಮಕ್ಕಳು ಸಹ ಮುಖಕ್ಕೆ ಮುಖ ವಸ್ತ್ರವನ್ನು ಧರಿಸಿಕೊಂಡು ಬರುತ್ತಿರುವುದು ಸಾಮಾನ್ಯವಾಗಿದೆ.

ರಾಜ್ಯದ ಬಹುತೇಕ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳಾದ ಶಿಕ್ಷಕ- ಉಪನ್ಯಾಸಕರು ಇಲ್ಲ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಕೊಠಡಿಗಳಿಲ್ಲ, ಶೌಚಾಲಯಗಳಿಲ್ಲ, ಕುಡಿಯಲು ಶುದ್ಧವಾದ ನೀರು ಇಲ್ಲ, ಗ್ರಂಥಾಲಯಗಳಿಲ್ಲ ಇವು ಯಾವ ಕೂಡ ಇವರಿಗೆ ವಿಷಯವೇ ಅಲ್ಲ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಅಲ್ಪಸಂಖ್ಯಾತ, ದಲಿತ, ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸಮುದಾಯಕ್ಕೆ ಸಮರ್ಪಕವಾಗಿ ಗುಣಮಟ್ಟದ ಶಿಕ್ಷಣ ಸಿಗದಿದ್ದರೂ ಪರವಾಗಿಲ್ಲ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಬ್ ಹಾಕಿಕೊಂಡರೆ  ಅದು ಇವರಿಗೆ ದೊಡ್ಡ ವಿಷಯ ಅಲ್ಲವೇ? ಎಂದು ಪ್ರಶ್ನೆ ಮಾಡಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯ ಅಧ್ಯಕ್ಷ ಅಮರೇಶ ಕಡಗದ, ಗಂಗಾವತಿ ತಾಲೂಕಿನ ತಾಲೂಕ ಕಾರ್ಯದರ್ಶಿ ಶಿವಕುಮಾರ, ಪ್ರಮುಖರಾದ ಸೋಮನಾಥ ಹಾಗೂ ವಿದ್ಯಾರ್ಥಿಗಳಾದ ಭೀಮೇಶ್, ಶಿವಕುಮಾರ, ಮಂಜುನಾಥ ಇತರರು ಇದ್ದರು.

Donate Janashakthi Media

Leave a Reply

Your email address will not be published. Required fields are marked *