ನೀಟ್ ವಿಳಂಬದಿಂದ ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್: ಸಚಿವ ಅಶ್ವತ್ಥನಾರಾಯಣ

Please follow and like us:

ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ಆಗಿರುವ ವಿಳಂಬದಿಂದಾಗಿ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

‘ಇದುವರೆಗೆ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟುಗಳ ಹಂಚಿಕೆ ಒಟ್ಟೊಟ್ಟಿಗೆ ನಡೆಯುತ್ತಿತ್ತು. ಆದರೆ ಈ ವರ್ಷ ನೀಟ್ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿದ್ದರಿಂದ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಹೀಗಾಗಿ, ಅನಿಶ್ಚಿತ ಪರಿಸ್ಥಿತಿ ತಲೆದೋರಿದೆ. ಇದರಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಪ್ರವೇಶಾತಿ ಪಡೆದಿರುವವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ, ಆಸಕ್ತರು ಅಲ್ಲಿಗೆ ಹೋಗಬಹುದು. ಅದಕ್ಕೆ ಯಾವುದೇ ದಂಡ ವಸೂಲಿ ಮಾಡುವುದಿಲ್ಲ. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕವನ್ನೂ ಮುಟ್ಟುಗೋಲು ಹಾಕಿಕೊಳ್ಳುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳಿಗೆ ಹಿಂದಿರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರವೇಶ ಪಡೆದ ನಂತರ ಸೀಟು ಬಿಟ್ಟು ಹೋಗುವವರಿಗೆ ಶುಲ್ಕದ ಐದು ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ. ಆದರೆ ಈ ಬಾರಿ ಇದಕ್ಕೆ ವಿನಾಯಿತಿ ನೀಡಲಾಗಿದೆ. ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ‌ ಅನ್ವಯಿಸುತ್ತದೆ ಎಂದರು.

Please follow and like us:
Donate Janashakthi Media

Leave a Reply

Your email address will not be published. Required fields are marked *