ಹಿಜಾಬ್‌ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

  • ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠ ತೀರ್ಪು ಪ್ರಕಟ
  • ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದ ಹೈಕೋರ್ಟ್

ಬೆಂಗಳೂರು : ಹಿಜಾಬ್ ಧರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಕಳೆದ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರು, ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು ಮತ್ತು ಸರ್ಕಾರದ ಪರ ನಡೆದ ಸುದೀರ್ಘ ವಾದಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ವಿಸ್ತೃತ ಪೀಠ, ತೀರ್ಪು ಪ್ರಕಟಿಸಿದೆ.

ವಿವಾದದ ಬಗ್ಗೆ ಸುರ್ಧೀರ್ಘ ವಿಚಾರಣೆ ನಡೆಸಿರುವ ಸಿಜೆ‌ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್ ದೀಕ್ಷಿತ್, ‌ನ್ಯಾ.ಖಾಜಿ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಅರ್ಜಿಗಳನ್ನು ವಜಾ ಮಾಡಿದೆ.ವಿವಾದದ ಬಗ್ಗೆ ಸುರ್ಧೀರ್ಘ ವಿಚಾರಣೆ ನಡೆಸಿರುವ ಸಿಜೆ‌ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್ ದೀಕ್ಷಿತ್, ‌ನ್ಯಾ.ಖಾಜಿ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಅರ್ಜಿಗಳನ್ನು ವಜಾ ಮಾಡಿದೆ.

ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಹೆಚ್ಚುವರಿ ಪೊಲೀಸ್‌ ಪಡೆಯನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ. ಜೊತೆಗೆ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಹೈಕೋರ್ಟ್‌ ತೀರ್ಪಿನಲ್ಲಿ ಉಲ್ಲೇಖಿಸಿದ ಮಹತ್ವದ ವಿಚಾರಗಳು:

1- ವಿದ್ಯಾರ್ಥಿನಿಯರು ಸಮವಸ್ತ್ರ ಸಂಹಿತೆ ಆದೇಶ ಪಾಲಿಸಲೇಬೇಕು

2. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವೇ ಅಲ್ಲ

3. ಸಮವಸ್ತ್ರ ಕಡ್ಡಾಯಕ್ಕೆ ವಿದ್ಯಾರ್ಥಿಗಳು ವಿರೋಧಿಸುವಂತಿಲ್ಲ

4. ವಿದ್ಯಾರ್ಥಿನಿಯರು ಸಮವಸ್ತ್ರ ಸಂಹಿತೆ ಆದೇಶ ಪಾಲಿಸಲೇಬೇಕು

5. ಸಮವಸ್ತ್ರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ

6. ಹಿಜಾಬ್ಗೆ ಅವಕಾಶ ಕೊಡುವುದು ಬಿಡುವುದು ಆಯಾ ಸಂಸ್ಥೆಗೆ ಬಿಟ್ಟದ್ದು

7. ಹಿಜಾಬ್ಗೆ ಅವಕಾಶ ಇಲ್ಲ ಎಂದರೆ ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಹಕ್ಕಿನ ಉಲ್ಲಂಘನೆ ಅಲ್ಲ

8. ಶಾಲಾ- ಕಾಲೇಜಿನ ಸಮವಸ್ತ್ರ ನೀತಿ ಪಾಲಿಸುವುದು ವಿದ್ಯಾರ್ಥಿನಿಯರ ಕರ್ತವ್ಯ

9. ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

Donate Janashakthi Media

Leave a Reply

Your email address will not be published. Required fields are marked *