ಹಿಜಾಬ್ ವಿವಾದ: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ

ಬೆಂಗಳೂರು: ಹಿಜಾಬ್‌-ಮವಸ್ತ್ರ ಸಂಹಿತೆ ವಿವಾದಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು, ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ.

ಹಿಜಾಬ್‌ಗೆ ವಿಧಿಸಿದ ನಿರ್ಬಂಧ ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮನವಿಗಳನ್ನು ರಾಜ್ಯ ಹೈಕೋರ್ಟ್‌ ವಜಾಗೊಳಿಸಿದೆ. ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿದೆ.

ಹೈಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಿ ಪರೀಕ್ಷೆ ಬರೆಯುವುದಾಗಿ ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಹಿಜಾಬ್ ಪರ ವಕೀಲರು ತಿಳಿಸಿದ್ದು, ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಈಗ ಶೈಕ್ಷಣಿಕ ವರ್ಷದ ಕೊನೆಯಾದ್ದರಿಂದ ಶಾಲಾ-ಕಾಲೇಜುಗಳಲ್ಲಿ ವಾರ್ಷಿಕ ಪರೀಕ್ಷೆಯ ಸಮಯವಿದೆ.  ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೊರೆ ಸುಪ್ರೀಂ ಕೋರ್ಟ್‌ ತೀರ್ಪಿನವರೆಗೂ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಿ ಎಂದು ವಿದ್ಯಾರ್ಥಿ ಪ್ರತಿನಿಧಿಗಳು ಒತ್ತಾಯಿಸುತ್ತಿದ್ದಾರೆ.

ರಾಜ್ಯ ಸರ್ಕಾರದ ಆದೇಶವನ್ನು ಕೋರ್ಟ್ ಎತ್ತಿಹಿಡಿದಿದೆ. ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾ ಮಾಡಿದೆ. ಹೈಕೋರ್ಟ್ ನೀಡಿದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಕೋರ್ಟ್ ತೀರ್ಪಿನ ಪ್ರತಿ ನೋಡಿಕೊಂಡು ಮುಂದಿನ ಕ್ರಮ ಎಂದು ಅರ್ಜಿದಾರರ ಪರ ವಕೀಲ ಶತಭಿಷ ಶಿವಣ್ಣ ಹೇಳಿಕೆ ನೀಡಿದ್ದಾರೆ.

ಸಂವಿಧಾನಬದ್ಧವಾಗಿ ಕಾನೂನು ಹೋರಾಟ: ವಕ್ಫ್‌ ಬೋರ್ಡ್‌ ಅಧ್ಯಕ್ಷ

ಸಂವಿಧಾನಬದ್ಧವಾಗಿ ಕಾನೂನು ಹೋರಾಟ ಮಾಡಲಾಗುವುದು. ಹೆಣ್ಣು ಹಿಜಬ್‌ ಧರಿಸುವ ಬಗ್ಗೆ ಕುರಾನ್‌ನಲ್ಲಿ ಸ್ಪಷ್ಟ ಉಲ್ಲೇಖವಿದೆ. ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಉಲೆಮಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ ತಿಳಿಸಿದ್ದಾರೆ.

ನಮ್ಮ ಹೆಣ್ಣುಮಕ್ಕಳಿಗೆ ಶಿಕ್ಷಣ ಮುಖ್ಯವಾಗಿದೆ. ಷರಿಯತ್‌ ಬದ್ಧವಾಗಿ ಅವರಿಗೆ ಶಿಕ್ಷಣ ಸಿಗಬೇಕಿದೆ. ಹೀಗಾಗಿ ಈ ಬಗ್ಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *