ಬೆಂಗಳೂರು: ಸಮಾಜವಾದಿ ಚಿಂತಕ ಡಾ. ರಾಮಮನೋಹರ ಲೋಹಿಯಾ ಜನ್ಮದಿನಾಚರಣೆಯಂದು ಕೊಡಮಾಡುವ ʻʻಡಾ. ರಾಮಮನೋಹರ ಲೋಹಿಯಾ ಪ್ರಶಸ್ತಿʼಯು ಈ ಬಾರಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಫಲಕ, ಫಲತಾಂಬೂಲ ಹಾಗೂ ರೂ. 25,000 ನಗದು, ಒಳಗೊಂಡಿದೆ. ಮಾಜಿ ಸಭಾಪತಿ ಡಾ. ಬಿ.ಎಲ್. ಶಂಕರ್, ಚಲನಚಿತ್ರ ನಿರ್ದೇರ್ಶಕ ಟಿ.ಎನ್. ಸೀತಾರಾಂ ಮತ್ತು ಮಾಜಿ ಶಾಸಕ ಬಿ.ಆರ್. ಪಾಟೀಲ್ ಅವರನ್ನೊಳಗೊಂಡ ಪ್ರಶಸ್ತಿ ಆಯ್ಕೆ ಸಮಿತಿಯು ಈ ಬಾರಿ ಸಿದ್ಧರಾಮಯ್ಯ ಅವರ ಹೆಸರನ್ನು ಅಂತಿಮಗೊಳಿಸಿದೆ.
2022ರ ಮಾರ್ಚ್ 23ರಂದು ಸಂಜೆ 5.30ಕ್ಕೆ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಪ್ರಧಾನ ಮಾಡಲಾಗುವುದು ಎಂದು ಭಾರತ ಯಾತ್ರಾ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕೆ.ವಿ. ನಾಗರಾಜಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಡಾ. ಬಿ.ಎಲ್. ಶಂಕರ್ ವಹಿಸಿದ್ದು, ಪ್ರಶಸ್ತಿ ಪುರಸ್ಕಾರವು ದೆಹಲಿಯ ಜೆ.ಎನ್.ಯು. ಪ್ರಾಧ್ಯಾಪಕ, ಸಮಾಜವಾದಿ ಚಿಂತಕ ಪ್ರೊ. ಆನಂದಕುಮಾರ್, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ವಸುಂಧರಾ ಭೂಪತಿ ಮತ್ತು ಡಾ. ನಾಡಗೌಡ ಅವರ ಸಮ್ಮುಖದಲ್ಲಿ ನಡೆಯಲಿದೆ.