ಸತತ 2ನೇ ಬಾರಿ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್‌ ಅಧಿಕಾರ ಸ್ವೀಕಾರ

ಲಖನೌ(ಉತ್ತರ ಪ್ರದೇಶ): ಯೋಗಿ ಆದಿತ್ಯನಾಥ್​ ಸತತ ಎರಡನೇ ಬಾರಿಗೆ ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. 37 ವರ್ಷಗಳ ಬಳಿಕೆ ಎರಡನೇ ಅವಧಿ ಅಂದರೆ, 22ನೇ ಮುಖ್ಯಮಂತ್ರಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಏಕನಾ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಯೋಗಿ ಆದಿತ್ಯನಾಥ್​ ಅವರಿಗೆ ರಾಜ್ಯಪಾಲೆ ಆನಂದಿ ಬೆನ್ ಅಧಿಕಾರದ ಗೋಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಇದರ ಬೆನ್ನಲ್ಲೇ, ಉಪ ಮುಖ್ಯಮಂತ್ರಿಗಳಾಗಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಿಜೇಶ್​ ಪಾಟಕ್​ ಪ್ರಮಾಣ ವಚನ ಸ್ವೀಕರಿಸಿದರು. ಚುನಾವಣೆಯಲ್ಲಿ ಸೋಲು ಕಂಡಿರುವ ಕೇಶವ್​ ಪ್ರಸಾದ್​ಗೂ ಬಿಜೆಪಿ ಹೈಕಮಾಂಡ್ ಮಣೆ ಹಾಕಿದ್ದು ಇಲ್ಲಿ ಗಮನಾರ್ಹ.

ಇದನ್ನು ಓದಿ: ಉತ್ತರ ಪ್ರದೇಶ: ಕೋಮುವಾದಿ ಅಜೆಂಡಾಕ್ಕೇ ಜೋತು ಬಿದ್ದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿಯಿಂದ ಆಯ್ಕೆಯಾಗಿರುವ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಟ್ಟು 47 ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಐದು ಸಲ ಲೋಕಸಭೆ ಸಂಸದರಾಗಿ ಗೋರಖ್​ಪುರ ಕ್ಷೇತ್ರ ಪ್ರತಿನಿಧಿಸಿರುವ ಯೋಗಿ ಆದಿತ್ಯನಾಥ್​ ಇದೇ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆ ಬಯಸಿ ಚುನಾವಣೆಯಲ್ಲಿ ಕಣಕ್ಕಿಳಿದಿದ್ದರು.

ಇದನ್ನು ಓದಿ: ಉತ್ತರ ಪ್ರದೇಶ : ಉಪಮುಖ್ಯಮಂತ್ರಿ ಸೇರಿ 11 ಮಂತ್ರಿಗಳ ಸೋಲು

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್ ಧಾಮಿ ಸೇರಿದಂತೆ ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ಸಮಾರಂಭದಲ್ಲಿ 85 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಿದ್ದರು.

ಕಳೆದ 70 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಉತ್ತರ ಪ್ರದೇಶ 21 ಮುಖ್ಯಮಂತ್ರಿಗಳನ್ನು ಕಂಡಿದ್ದರೂ ಸಹ ಕೇವಲ ಮೂವರು ಮಾತ್ರ ಐದು ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಈ ಹಿಂದೆ ಬಿಎಸ್​ಪಿ ನಾಯಕಿ ಮಾಯಾವತಿ 2007-2012ರಲ್ಲಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ 2012-2017ರ ತಮ್ಮ ಅವಧಿಯಲ್ಲಿ ಅಧಿಕಾರ ಸಂಪೂರ್ಣಗೊಳಿಸಿದ್ದರು. ಇದಾದ ಬಳಿಕ ಯೋಗಿ ಆದಿತ್ಯನಾಥ್ ಪೂರ್ಣಾವಧಿ ಮುಗಿಸಿದ 3ನೇ ಮುಖ್ಯಮಂತ್ರಿಯಾಗಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *