ಮಾ.28ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಆರಂಭ

ಬೆಂಗಳೂರು: ಕೊರೊನಾ ಸಾಂಕ್ರಾಮಿತೆಯ ನಂತರದಲ್ಲಿ ಇದೇ ಮೊದಲ ಬಾರಿಗೆ 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ  ಪರೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ನಂತರ ನಡೆಯುತ್ತಿರುವ ಮೊದಲ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದಾಗಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಬೋರ್ಡ್ ಕಠಿಣ ಕ್ರಮಗಳನ್ನು ಕೈಗೊಂಡಿವೆ.

ಮಾರ್ಚ್‌ 28 ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿದೆ. ಈ‌ ಬಾರಿ ವಿದ್ಯಾರ್ಥಿಗಳು ಪ್ರವೇಶಾತಿ ಪತ್ರಗಳನ್ನು ಶಾಲಾ ಅಂತರ್ಜಾಲ ತಾಣದಲ್ಲಿ ಪಡೆದುಕೊಳ್ಳಬಹುದು. ಅಲ್ಲದೆ, ಇಂದಿನಿಂದ ಎಲ್ಲಾ ಶಾಲೆಗಳಲ್ಲಿ ಪ್ರವೇಶಾತಿ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಕೊಡಲಾಗುತ್ತಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾತನಾಡಿ, ಪರೀಕ್ಷೆಗಳನ್ನು ಆಫ್‌ಲೈನ್‌ನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಧಾರವಾಡದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಇತರ ಜಿಲ್ಲೆಗಳಲ್ಲಿಯೂ ಹಿಜಾಬ್‌ ವಿವಾದ ಪಸರಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.73 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹೆಣ್ಣು ಮಕ್ಕಳು 4 ಲಕ್ಷದ 21ಸಾವಿರದ 110 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಗಂಡು ಮಕ್ಕಳು 4 ಲಕ್ಷದ 52 ಸಾವಿರದ 765 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತೃತೀಯ ಲಿಂಗಿ 4 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ರಾಜ್ಯದಲ್ಲಿ ಒಟ್ಟು 3,444 ಪರೀಕ್ಷಾ ಕೇಂದ್ರಗಳನ್ನ ತೆರೆಯಲಾಗಿದೆ. ಖಾಸಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ತೆರಯಲಾಗಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಅಧಿಕ್ಷರು, ಮುಖ್ಯ ಅಧಿಕ್ಷರನ್ನ ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಕೊಠಡಿ ಮೆಲ್ವೀಚಾರಕರು, ಸ್ಥಳೀಯ ಜಾಗೃತದಳದ ನೇಮಕ ಕೂಡ ಮಾಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ 

  • ಮಾರ್ಚ್ 28ರಂದು: (ಪ್ರಥಮ ಭಾಷೆ) ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್, ಸಂಸ್ಕೃತ
  • ಮಾರ್ಚ್ 30ರಂದು: (ದ್ವಿತೀಯ ಭಾಷೆ) ಇಂಗ್ಲಿಷ್, ಕನ್ನಡ
  • ಏಪ್ರಿಲ್ 01ರಂದು: ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕ್ ಇಂಜಿನಿಯರಿಂಗ್, ಇಂಜಿನಿಯರಿಂಗ್ ಗ್ರಾಫಿಕ್ಸ್ -2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಅರ್ಥಶಾಸ್ತ್ರ
  • ಏಪ್ರಿಲ್ 04ರಂದು: ಗಣಿತ, ಸಮಾಜಶಾಸ್ತ್ರ
  • ಏಪ್ರಿಲ್ 06ರಂದು: ಸಮಾಜ ವಿಜ್ಞಾನ
  • ಏಪ್ರಿಲ್ 08ರಂದು: (ತೃತೀಯ ಭಾಷೆ) ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
  • ಎನ್‌ಎಸ್‌ಕ್ಯೂ ಪರೀಕ್ಷಾ ವಿಷಯಗಳು: ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್
  • ಏಪ್ರಿಲ್ 11ರಂದು: ವಿಜ್ಞಾನ, ರಾಜ್ಯಶಾಸ್ತ್ರ

ಸಿದ್ಧತೆಗಳು ಹೀಗಿವೆ

  • ಹಳೆ ಪದ್ಧತಿಯಲ್ಲಿ ಎಸ್‌ಎಸ್‌ಎಲ್‌ ಪರೀಕ್ಷೆ
  • ಈ ವರ್ಷದ ಪ್ರಶ್ನೆ ಪತ್ರಿಕೆಯಲ್ಲಿ ಶೇಕಡಾ 20% ಪಠ್ಯಗಳು ಕಡಿತ
  • ಉಳಿದ ಶೇಕಡಾ 80ರಷ್ಟು ಪಠ್ಯಗಳಿಗೆ ಪ್ರಶ್ನೆಗಳನ್ನು ರಚಿಸಲಾಗಿದೆ.
  • ಬೆಳ್ಳಿಗೆ 10.30 ರಿಂದ 1.45 ರವರೆಗೆ ಪರೀಕ್ಷೆ ನಡೆಯಲಿದೆ
  • ಒಟ್ಟು 3 ಗಂಟೆ 15 ನಿಮಿಷಗಳ ಕಾಲ ಪರೀಕ್ಷೆ ನಡೆಯಲಿದೆ

ಉಚಿತ ಪ್ರಯಾಣ

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಅವಕಾಶ ಮಾಡಿಕೊಟ್ಟಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದ್ದು, ಪರೀಕ್ಷಾ ಕೇಂದ್ರದವರೆಗೆ ನಿಗಮದ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲು ಉಚಿತವಾಗಿ ಪ್ರಯಾಣಿಸಬಹುದು.

Donate Janashakthi Media

Leave a Reply

Your email address will not be published. Required fields are marked *