ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿನಿಯರಿಗೆ ಮುಸ್ಲಿಂ ಧರ್ಮಗುರುಗಳ ಮನವಿ

ಉಡುಪಿ: ಕರ್ನಾಟಕದಲ್ಲಿ ಸೋಮವಾರದಿಂದ (ಮಾರ್ಚ್ 28) ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದೆ. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿನಿಯರು ವಿದ್ಯಾಭ್ಯಾಸಕ್ಕಿಂತಲೂ ಧರ್ಮವೇ ಮುಖ್ಯ ಎಂಬರ್ಥದಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಉಡುಪಿಯ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡ ಖಾಜಿ ಅಬ್ದುಲ್ ಹಮೀದ್ ಮುಸಲಿಯಾರ್ ಮಾಣಿ, ‘ಪೋಷಕರು ತಮ್ಮ ಮಕ್ಕಳ ಪರೀಕ್ಷೆ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಸೂಕ್ಷ್ಮ ವಿಷಯಗಳನ್ನು ದೀರ್ಘ ದೃಷ್ಟಿಯಿಂದ ನೋಡಬೇಕು. ದೇಶದಲ್ಲಿ ಕೋಮು ಸೌಹಾರ್ದತೆಗೆ ನಮ್ಮಿಂದ ಧಕ್ಕೆ ಆಗಬಾರದು’ ಎಂದು ಮನವಿ ಮಾಡಿದರು.

ಸಮವಸ್ತ್ರದ ಜತೆಗೆ ಹಿಜಾಬ್​ ವಿಚಾರವೂ ಇದೀಗ ಸುಪ್ರೀಂಕೋರ್ಟ್​ನಲ್ಲಿದೆ. ಸುಪ್ರೀಂಕೋರ್ಟ್​ನಲ್ಲಿ ನ್ಯಾಯ ಸಿಗುವ ಸಂಪೂರ್ಣ ವಿಶ್ವಾಸವಿದೆ. ನಮ್ಮ ಸಮುದಾಯ ಶಿಕ್ಷಣದಿಂದ ವಂಚಿತರಾಗಬಾರದು. ಭಾರತ ಒಂದು ಜಾತ್ಯತೀತ ರಾಷ್ಟ್ರ. ಸಂವಿಧಾನವು ಅವರವರ ಧರ್ಮ ಆಚರಣೆಗೆ ಅವಕಾಶ ನೀಡಿದೆ. ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗುವ ತಪ್ಪು ಮಾಹಿತಿಗಳು ಸಮಸ್ಯೆ ಬಿಗಡಾಯಿಸಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಾ.28ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಆರಂಭ

ಪರೀಕ್ಷೆಗೆ ತಪ್ಪಿಸಿಕೊಳ್ಳಬೇಡಿ: ವಿದ್ಯಾರ್ಥಿನಿಯರಿಗೆ ಉಲೆಮಾ ಕರೆ

ಮಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ತಪ್ಪದೆ ಪರೀಕ್ಷೆಗೆ ಹಾಜರಾಗಬೇಕು ಎಂದು ಮುಸ್ಲಿಂ ಧರ್ಮಗುರು, ಉಲೆಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಕಾಂತಾಪುರಂ ಕರೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರ ಸುಪ್ರಿಂಕೋರ್ಟ್​ನಲ್ಲಿದೆ. ಅಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಅಲ್ಲಿಯವರೆಗೆ ಕಾಯುವುದರ ಜೊತೆಗೆ ಪರೀಕ್ಷೆಯೂ ಮುಖ್ಯ. ಎಲ್ಲರೂ ಗರಿಷ್ಠ ಅನುಕೂಲಗಳನ್ನು ಬಳಸಿ ಪರೀಕ್ಷೆ ಬರೆಯಬೇಕು ಎಂದು ಹೇಳಿದರು

Donate Janashakthi Media

Leave a Reply

Your email address will not be published. Required fields are marked *