ದೊಡ್ಡ ಪಕ್ಷದ ಗೂಂಡಾಗಿರಿ-ಜನರಿಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ: ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕೇಂದ್ರದಲ್ಲಿ ಅಧಿಕಾರದಲ್ಲಿರುವ ದೇಶದ ಅತಿ ದೊಡ್ಡ ಪಕ್ಷ ಇಂತಹ ಗೂಂಡಾಗಿರಿ ನಡೆಸಿದರೆ, ಜನರಿಗೆ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಜನರು ಇದೇ ಸರಿಯಾದ ಮಾರ್ಗ ಎಂದು ಭಾವಿಸುತ್ತಾರೆ. ಈ ರೀತಿಯಾದರೆ, ದೇಶ ಪ್ರಗತಿ ಹೊಂದಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಕುರಿತು ತಮ್ಮ ದೆಹಲಿ ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಬಿಜೆಪಿ ಬೆಂಬಲಿತ ಯುವ ಘಟಕದ ಸದಸ್ಯರು ನಿನ್ನೆ ದಾಳಿ ನಡೆಸಿದ್ದರು.

ಈ ಬಗ್ಗೆ ಕೇಜ್ರಿವಾಲ್, ಇಲ್ಲಿ ಅರವಿಂದ್ ಕೇಜ್ರಿವಾಲ್ ಮುಖ್ಯವಲ್ಲ. ಆದರೆ, ದೇಶ ಮುಖ್ಯ. ನಾನು ರಾಷ್ಟ್ರಕ್ಕಾಗಿ ನನ್ನ ಪ್ರಾಣವನ್ನೇ ನೀಡಬಲ್ಲೆ. ಇಂತಹ ಗೂಂಡಾಗಿರಿಯಿಂದ ಭಾರತ ಪ್ರಗತಿ ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನು ಓದಿ: ಸಾಮಾಜಿಕ ಜಾಲತಾಣದ ತುಂಬ ” ಕಾಶ್ಮೀರ್‌ ಫೈಲ್ಸ್‌” ದೇ ಚರ್ಚೆ

ದೆಹಲಿ ಮುಖ್ಯಮಂತ್ರಿಗಳ ಮನೆಗೆ ನುಗ್ಗಿದ ಕಾರ್ಯಕರ್ತರು ಅವರ ಮನೆ ಬ್ಯಾರಿಕೇಡ್​ಗಳನ್ನು ದಾಟಿ ಮನೆ ಪ್ರವೇಶಕ್ಕೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಈ ನಡುವೆಯೂ ಗೇಟ್​​, ಸಿಸಿಟಿವಿ ಸೇರಿದಂತೆ ಅನೇಕ ವಸ್ತುಗಳನ್ನು ಧ್ವಂಸ ಗೊಳಿಸಿದ್ದಾರೆ.

ದಾಳಿ ಕುರಿತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪ್ರತಿಕ್ರಿಯಿಸಿದ್ದು, ಚುನಾವಣೆಯಲ್ಲಿ ಬಿಜೆಪಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಸಾಧ್ಯವಾಗದ ಕಾರಣ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು.

ಬಿಜೆಪಿ ಯುವ ಮೋರ್ಚಾದ 100ಕ್ಕೂ ಹೆಚ್ಚಿನ ಪ್ರತಿಭಟನಾಕಾರರು ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸಲು ಸಜ್ಜಾದರು. ಪೊಲೀಸರು ಅವರನ್ನು ತಡೆಯುವ ಯತ್ನ ನಡೆಸಿದರೂ ಅವರು ಬ್ಯಾರಿಕೇಡ್​​​ಗಳನ್ನು ದಾಟಿ ಬಂದು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ಸುಮಾರು 70 ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಇದನ್ನು ಓದಿ: ಅದುಮಿಡಲಾದ ಸತ್ಯ: ‘ಕಾಶ್ಮೀರ್ ಫೈಲ್ಸ್’ ಅಥವಾ ‘ಫರ್ಜಾನಿಯ’?

ಸಿನಿಮಾ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಅರವಿಂದ ಕೇಜ್ರಿವಾಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟಕಾರರು ಮುಖ್ಯಮಂತ್ರಿ ಮನೆ ಮೇಲೆ ದಾಳಿಗೆ ಮುಂದಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು 8 ಮಂದಿಯನ್ನು ಬಂಧನಕ್ಕೊಳಪಡಿಸಿ ವಿಚಾರಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಕೇಜ್ರಿವಾಲ್‌ ಅವರನ್ನು ಹತ್ಯೆ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ಗಂಭೀರ ಆರೋಪ ಮಾಡಿತ್ತು. ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಆಗಬೇಕು ಎಂದು ಎಎಪಿ ಸಚಿವರು, ಶಾಸಕರು ಆಗ್ರಹಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *