ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ‘ಹೈ’ ಸೂಚನೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.

ಗುತ್ತಿಗೆದಾರ ಸಾಯುವ ಮುನ್ನ ಕೆ.ಎಸ್​.ಈಶ್ವರಪ್ಪ ಅವರ ಹೆಸರನ್ನ ಹೇಳಿರುವ ಹಿನ್ನೆಲೆಯಲ್ಲಿ ರಾಜೀನಾಮೆಗೆ ಒತ್ತಡ ಕೇಳಿಬಂದಿದ್ದವು.

ಹೈಕಮಾಂಡ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅಲ್ಲದೆ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವರು ಮೈಸೂರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡುವ ಸಾಧ್ಯತೆಗಳಿವೆ. ಇತ್ತ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಮಧ್ಯಾಹ್ನ ರಾಜಧಾನಿಗೆ ವಾಪಸ್ಸಾಗಲಿದ್ದಾರೆ.

ನಿನ್ನೆ ರಾತ್ರಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ದೆಹಲಿಯಲ್ಲಿ ಅಮಿತ್ ಶಾ ಜೊತೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಕರಣ ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಮಾಹಿತಿ ಪಡೆದುಕೊಂಡ ಬಳಿಕ ಹೈಕಮಾಂಡ್ ಈಶ್ವರಪ್ಪ ರಾಜೀನಾಮೆಗೆ ಸೂಚನೆ ಕೊಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮಧ್ಯಾಹ್ನ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ವಲಯದಿಂದ ಕೇಳಿ ಬಂದಿದೆ.

ಇಂದು ಬೆಳಗ್ಗೆ ಹೈಕಮಾಂಡ್ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮೂಲಕ ಹೈಕಮಾಂಡ್ ಗೆ ವಿವರಣೆ ನೀಡಲಾಗಿದೆ. ಈಶ್ವರಪ್ಪ ಅವರಿಂದ ವಿವರಣೆ ಪಡೆದು ಹೈಕಮಾಂಡ್ ಗೆ ರವಾನೆ ಮಾಡಲಾಗಿದೆ. ಈಶ್ವರಪ್ಪ ವಿವರಣೆಗೆ ಹೈಕಮಾಂಡ್ ಗರಂ ಆಗಿದೆ.

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದ ಸಂತೋಷ್ ಪಾಟೀಲ್ ಮಾಧ್ಯಮ ಪತ್ರಿನಿಧಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೋಮವಾರ ತಡರಾತ್ರಿ ವಾಟ್ಸಪ್ ಮೆಸೇಜ್ ಮಾಡಿದ್ದರು. ತಮ್ಮ ವಾಟ್ಸಪ್ ಸಂದೇಶದಲ್ಲು, ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದರು. ಈಶ್ವರಪ್ಪ ಅವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *