ಸಂತೋಷ್ ಪಾಟೀಲ್ ಮನೆಗೆ ಡಿಕೆಶಿ ಭೇಟಿ; 11 ಲಕ್ಷ ಪರಿಹಾರ ಚೆಕ್ ವಿತರಣೆ

ಬೆಳಗಾವಿ: 40% ಕಮಿಷನ್‌ ವಿಚಾರವಾಗಿ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ರೂ. 11 ಲಕ್ಷ ಪರಿಹಾರ ಮೊತ್ತದ ಚೆಕ್‌ ವಿತರಿಸಿದರು.

ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಮೃತ ಸಂತೋಷ್ ಪತ್ನಿ ಮತ್ತು ಆತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಬಿಜೆಪಿ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ಅವರೇ ಕಾರಣವೆಂದು ಗಂಭೀರ ಆರೋಪಗಳು ಇದ್ದು, ಈಗಾಗಲೇ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು.

ಕಾಂಗ್ರೆಸ್‌ ನಾಯಕರು, ಸಂತೋಷ್ ಪಾಟೀಲ್ ಸಾವನ್ನಪ್ಪಿದಾಗ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಕ್ಷದಿಂದ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಬೆಳಗಾವಿಗೆ ಭೇಟಿ ನೀಡಿದ್ದ ಡಿ ಕೆ ಶಿವಕುಮಾರ್‌ ಅವರು ಚೆಕ್‌ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ಇದರ ಜೊತೆಗೆ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವುದಾಗಿ ಡಿಕೆಶಿ ಭರವಸೆ ನೀಡಿದರು.

Donate Janashakthi Media

Leave a Reply

Your email address will not be published. Required fields are marked *