ಅಸ್ಸಾಂ ಭಾರೀ ಪ್ರವಾಹ: ಮೂವರ ಸಾವು, 6 ಜಿಲ್ಲೆಗಳಲ್ಲಿ 25,000ಕ್ಕೂ ಹೆಚ್ಚು ಜನರು ಸಂತ್ರಸ್ತ

ನವದೆಹಲಿ/ಬೆಂಗಳೂರು: ವರ್ಷದ ಮುಂಗಾರು ಆರಂಭಕ್ಕೂ ಮುನ್ನ ಸಂಭವಿಸಿದ ಮೊದಲ ಪ್ರವಾಹದಿಂದಾಗಿ ಅಸ್ಸಾಂ ರಾಜ್ಯದ  ಆರು ಜಿಲ್ಲೆಗಳಲ್ಲಿ ಸುಮಾರು 25 ಸಾವಿರ ಮಂದಿ ಸಂತ್ರಸ್ತರಾಗಿದ್ದಾರೆ. ದಿಮಾ ಹಸಾವೊ ಜಿಲ್ಲೆಯ ಹಫ್ಲಾಂಗ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ ಘಟನೆಗಳಲ್ಲಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಅಸ್ಸಾಂ ಮತ್ತು ನೆರೆಯ ರಾಜ್ಯಗಳಾದ ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ನದಿಗಳ ನೀರಿನ ಮಟ್ಟ ಕ್ರಮೇಣ ಹೆಚ್ಚುತ್ತಿದ್ದು, ಕೊಪಿಲಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರವಾಹ ವರದಿಗಳ ಪ್ರಕಾರ, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು,  ದಿಮಾ ಹಸಾವೋ ಜಿಲ್ಲೆಯ 12 ಗ್ರಾಮಗಳಲ್ಲಿ ಭೂಕುಸಿತ ವರದಿಯಾಗಿದೆ. 80 ಮನೆಗಳಿಗೆ ತೀವ್ರ ಹಾನಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮೇ 14 ರವರೆಗೆ, ಆರು ಜಿಲ್ಲೆಗಳ 94 ಹಳ್ಳಿಗಳಲ್ಲಿ ಒಟ್ಟು 24,681 ಜನರು ಹಾನಿಗೊಳಗಾಗಿದ್ದಾರೆ.

ಸೇನೆ, ಅರೆ ಮಿಲಿಟರಿ ಪಡೆಗಳು, ಎಸ್‌ಡಿಆರ್‌ಎಫ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಕ್ಯಾಚಾರ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಂದ 2,150 ಜನರನ್ನು ರಕ್ಷಿಸಿವೆ. ಹೋಜೈ, ಲಖಿಂಪುರ, ನಾಗಾಂವ್ ಜಿಲ್ಲೆಗಳಲ್ಲಿ ಹಲವು ರಸ್ತೆಗಳು, ಸೇತುವೆಗಳು ಮತ್ತು ನೀರಾವರಿ ಕಾಲುವೆಗಳು ಪ್ರವಾಹದಿಂದ  ಹಾನಿಗೊಳಗಾಗಿವೆ.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ 1732.72 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಮುಳುಗಡೆಯಾಗಿದೆ. ಕ್ಯಾಚಾರ್ ಜಿಲ್ಲೆಯಲ್ಲಿಯೇ 21,000 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಸೇನೆ, ಅರೆ ಮಿಲಿಟರಿ ಪಡೆಗಳು, ಎಸ್‌ಡಿಆರ್‌ಎಫ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಶನಿವಾರ ಕ್ಯಾಚಾರ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಂದ 2,150 ಜನರನ್ನು ರಕ್ಷಿಸಿವೆ. ಹೋಜೈ, ಲಖಿಂಪುರ, ನಾಗಾಂವ್ ಜಿಲ್ಲೆಗಳಲ್ಲಿ ಹಲವಾರು ರಸ್ತೆಗಳು, ಸೇತುವೆಗಳು ಮತ್ತು ನೀರಾವರಿ ಕಾಲುವೆಗಳು ಹಾನಿಗೊಳಗಾಗಿವೆ.

ಅಸಾನಿ ಚಂಡಮಾರುತದ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ.

ಎಂದಿನಂತೆ ಜೂನ್‌ ತಿಂಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸುತ್ತಿದ್ದ ಮುಂಗಾರು ಮಳೆ ಈ ಬಾರಿ ಮೇ ತಿಂಗಳ್ಯಾಂತಕ್ಕೇ ರಾಜ್ಯಕ್ಕೆ ಕಾಲಿಡಲಿದೆ. ಜತೆಗೆ ಈ ಬಾರಿ ಮುಂಗಾರು ರಾಜ್ಯದಲ್ಲಿ ಉತ್ತಮ ಮಳೆ ಸುರಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಪ್ರತಿ ವರ್ಷ ಜೂನ್‌ 1 ಅಥವಾ ಅದರ ಬಳಿಕ ಕೇರಳದ ಕರಾವಳಿಗೆ ಮುಂಗಾರು ಪ್ರವೇಶವಾಗುತ್ತಿತ್ತು. ಈ ಬಾರಿ ಮೇ 27 ರಂದೇ ಕೇರಳದ ಕರಾವಳಿಗೆ ಮುಂಗಾರು ಮಾರುತ ಅಪ್ಪಳಿಸಲಿದೆ.

Donate Janashakthi Media

Leave a Reply

Your email address will not be published. Required fields are marked *