ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಹಾರ್ದಿಕ್ ಪಟೇಲ್

  • ಕಾಂಗ್ರೆಸ್ ಪಕ್ಷಕ್ಕೆ ವಿದಾಯ
  • ಸೋನಿಯಾಗಾಂಧಿಗೆ ರಾಜಿನಾಮೆ ಪತ್ರ ಸಲ್ಲಿಕೆ

ಹೊಸ ದಿಲ್ಲಿ: ರಾಹುಲ್ ಗಾಂಧಿಯವರ ಮುಖಾಂತರ ಕಾಂಗ್ರೆಸ್ ಪಕ್ಷಕ್ಕೆ ಪ್ರವೇಶ ಪಡೆದಿದ್ದ ಹಾರ್ದಿಕ್ ಪಟೇಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿದ್ದಾರೆ.

ಗುಜರಾತ್ ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ನ ಎಲ್ಲಾ ಹುದ್ದೆಗಳಿಗೂ ತಾವು ರಾಜೀನಾಮೆ ನೀಡುತ್ತಿರುವುದಾಗಿ ಹಾರ್ದಿಕ್ ಪಟೇಲ್ ಹೇಳಿದ್ದಾರೆ. “ನನ್ನ ನಿರ್ಧಾರವನ್ನು ಪ್ರತಿಯೊಬ್ಬ ಸಹೋದ್ಯೋಗಿ ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿಯರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಗುಜರಾತ್ ಸಮಸ್ಯಗಳ ಬಗ್ಗೆ ಚರ್ಚಿಸಿದ್ದೆ, ಆದರೆ ಅವರು ತಮ್ಮ ಮೊಬೈಲ್ ಫೋನ್ ನಲ್ಲಿ ಬ್ಯೂಸಿ ಆಗಿದ್ದರು. ಮತ್ತು ಗುಜರಾತ್ ಗೆ ಸಂಬಂಧಿಸಿದ ವಿಷಯಗಳನ್ನು ಕೇಳಿಸಿಕೊಳ್ಳವುದರಲ್ಲಿ ತಲ್ಲೀನರಾಗಿರಲಿಲ್ಲ ”ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಅನೇಕ ಬಾರಿ ಪ್ರಯತ್ನ ಮಾಡಿದ್ದೆ ಆದರೆ ಅದು ಸಾಧ್ಯವಾಗಿರಲಿಲ್ಲ. “ಕಾಂಗ್ರೆಸ್ ಪಕ್ಷದ ರಾಜಕೀಯವು ಸರ್ಕಾರ ಮಾಡುವ ಪ್ರತಿಯೊಂದಕ್ಕೂ ವಿರೋಧ ವ್ಯಕ್ತಪಡಿಸುವುದಕ್ಕೆ ಮಾತ್ರವೇ ಸೀಮಿತವಾಗಿದೆ” ಎಂದು ಪಟೇಲ್ ಆರೋಪಿಸಿದ್ದಾರೆ.

“ಕಾಂಗ್ರೆಸ್ ಪಕ್ಷವನ್ನು  ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು ಅನೇಕ ಪ್ರಯತ್ನಗಳನ್ನು ಮಾಡಿದ್ದರೂ, ನಿರಂತರವಾಗಿ ನಮ್ಮ ದೇಶ ಮತ್ತು ನಮ್ಮ ಸಮಾಜದ ವಿರುದ್ಧವಾಗಿಯೇ ಕೆಲಸ ಮಾಡುತ್ತಿದೆ. ರಾಮಮಂದಿರ ನಿರ್ಮಾಣ, ಸಿಎಎ-ಎನ್‌ಆರ್‌ಸಿ, ಆರ್ಟಿಕಲ್ 370, ಜಿಎಸ್‌ಟಿ ಅನುಷ್ಠಾನಕ್ಕೆ ಕಾಂಗ್ರೆಸ್ ಅಡ್ಡಿಯಾಗಿತ್ತು. ದೇಶ ಸಂಕಷ್ಟದಲ್ಲಿದ್ದಾಗ ವಿದೇಶದಲ್ಲಿದ್ದರು. ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕತ್ವ ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಎಲ್ಲದಕ್ಕೂ ವಿರೋಧ ವ್ಯಕ್ತಪಡಿಸುವುದರಲ್ಲಿಯೇ ಸೀಮಿತವಾಗಿದೆ ಎಂಬುದನ್ನು ನಾನು ಗಮನಿಸಿದ್ದೇನೆ. ಜನರು ತಮ್ಮ ಭವಿಷ್ಯ ಹಾಗೂ ದೇಶವನ್ನು ಮುನ್ನಡೆಸಲು ಸಮರ್ಥರಾಗಿರುವ ಪರ್ಯಾಯವನ್ನು ಜನರು ಯಾವಾಗಲೂ ಹುಡುಕುತ್ತಿರುತ್ತಾರೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್, ಸಮಾಜದ ಹಿತಾಸಕ್ತಿಗೆ ಸಂಪೂರ್ಣ ವಿರುದ್ಧವಾಗಿ ಕೆಲಸ ಮಾಡುತ್ತಿರುವ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ‘ದೇಶದ ಯುವಕರು ಸಮರ್ಥ ಮತ್ತು ಬಲಿಷ್ಠ ನಾಯಕತ್ವವನ್ನು ಬಯಸುತ್ತಾರೆ, ಆದರೆ ಕಾಂಗ್ರೆಸ್ ಪಕ್ಷವು ಕೇವಲ ಪ್ರತಿಭಟನೆಯ ರಾಜಕೀಯಕ್ಕೆ ಸೀಮಿತವಾಗಿದೆ. ಆದರೆ, ದೇಶದ ಜನರು ಪ್ರತಿಭಟಿಸುವುದಿಲ್ಲ, ಆದರೆ ಭವಿಷ್ಯದ ಬಗ್ಗೆ ಯೋಚಿಸುವ ಅಗತ್ಯವಿದೆ’ ಎಂದು ಪತ್ರದಲ್ಲಿ ಬರೆದಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *